ಮಂಗಳೂರು: ನಾಲ್ಕು ತಿಂಗಳ ಹಿಂದೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದ್ದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿರುವ(SEZ) ಸುಗಂಧ ದ್ರವ್ಯ ಕಂಪನಿಯಲ್ಲಿ ಇದೀಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಸುರತ್ಕಲ್ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಈ ಅವಘಡ ಉಂಟಾಗಿದೆ.
ಈ ಕೈಗಾರಿಕೆಯಲ್ಲಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದ್ದವು. ಬಳಿಕ ಇಲ್ಲಿ ದುರಸ್ತಿ ಕಾರ್ಯವೂ ನಡೆಯುತ್ತಿತ್ತು. ಆದರೆ ದುರಸ್ತಿ ಕಾರ್ಯ ಸಂದರ್ಭದಲ್ಲಿ ವೆಲ್ಡಿಂಗ್ ಮಾಡುತ್ತಿದ್ದಾಗ ಮತ್ತೆ ಬೆಂಕಿ ಹತ್ತಿಕೊಂಡಿದೆ.
ಈ ಹಿನ್ನೆಲೆಯಲ್ಲಿ ತಕ್ಷಣವೇ ಮಂಗಳೂರಿನ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ, ಎಚ್ಪಿಸಿಎಲ್, ಎನ್ಎಂಪಿಟಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.