ETV Bharat / state

ಬಂಟ್ವಾಳ: ಕಿಡಿಗೇಡಿಗಳಿಂದ ಎಸ್​​​ಡಿಪಿಐ ಕಚೇರಿಗೆ ಬೆಂಕಿ - ವಿಟ್ಲ ವಲಯದ ಎಸ್​​​ಡಿಪಿಐ ಕಚೇರಿ

ವಿಟ್ಲ ವಲಯದ ಎಸ್​​​ಡಿಪಿಐ ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೇಂಟ್ ಡಬ್ಬಗಳು ಪತ್ತೆಯಾಗಿವೆ. ಪೇಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

bantwala
ಎಸ್​​​ಡಿಪಿಐ ಕಚೇರಿಗೆ ಬೆಂಕಿ
author img

By

Published : Jan 4, 2021, 9:37 AM IST

ಬಂಟ್ವಾಳ: ವಿಟ್ಲ ವಲಯದ ಎಸ್​​​ಡಿಪಿಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ಮೇಗಿನಪೇಟೆಯಲ್ಲಿ ನಡೆದಿದೆ.

ಸೋಮವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೇಂಟ್ ಡಬ್ಬಗಳು ಪತ್ತೆಯಾಗಿವೆ. ಪೇಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಇನ್ನು ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಓದಿ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ಎಟಿಎಂ ಸ್ಥಾಪನೆಗೆ ಆದೇಶ: ಯುವ ಉದ್ಯಮಿ ಮನವಿಗೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್​​​ಡಿಪಿಐ ಮುಖಂಡ ಕಲಂದರ್ ಪರ್ತಿಪ್ಪಾಡಿ ಹಾಗೂ ಶಾಕೀರ್ ಅಳಕೆಮಜಲು ಅವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್​ಡಿಪಿಐ ಬೆಂಬಲಿತರು ಅಭೂತಪೂರ್ವ ಗೆಲವು ಸಾಧಿಸಿದ್ದರು. ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ಪಕ್ಷವನ್ನು ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.