ETV Bharat / state

ಚಲಿಸುತ್ತಿದ್ದ ಸಿಮೆಂಟ್ ಲಾರಿಗೆ ಬೆಂಕಿ: ಅಪಾಯದಿಂದ ಪಾರಾದ ಚಾಲಕ, ಕ್ಲೀನರ್ - Dakshina kannada news

ಆಕಸ್ಮಿಕವಾಗಿ ಸಿಮೆಂಟ್ ಲಾರಿಗೆ ಬೆಂಕಿ ತಗುಲಿ ಭಾಗಶಃ ಸುಟ್ಟು ಭಸ್ಮವಾದ ಘಟನೆ ಬೆಂಗಳೂರು-ಮಂಗಳೂರು ರಾಷ್ಟೀಯ ಹೆದ್ದಾರಿ 75ರಲ್ಲಿ ನಡೆದಿದೆ.

lorry
ಲಾರಿಗೆ ಬೆಂಕಿ
author img

By

Published : Aug 17, 2020, 1:31 PM IST

ನೆಲ್ಯಾಡಿ(ದಕ್ಷಿಣ ಕನ್ನಡ): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಸಿಮೆಂಟ್ ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಭಾಗಶಃ ಸುಟ್ಟುಹೋಗಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

lorry
ಸುಟ್ಟು ಹೋಗಿರುವ ಲಾರಿ

ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ತಗುಲಿರುವುದು ಗಮನಕ್ಕೆ ಬಂದ ಕೂಡಲೇ ಚಾಲಕ ಲಾರಿಯನ್ನು ನಿಲ್ಲಿಸಿ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾನೆ. ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ವಾಹನ ಬೆಂಕಿ ನಂದಿಸುವ ಕಾರ್ಯ ಮಾಡಿದೆ.

ಬೆಂಕಿಯ ಜ್ವಾಲೆಗೆ ಲಾರಿಯ ಟೈಯರ್ ಸುಟ್ಟು ಹೋಗಿದ್ದು ಹೆಚ್ಚಿನ ಅನಾಹುತ ನಡೆದಿಲ್ಲ. ಘಟನೆಯಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.