ಮಂಗಳೂರು : ಮಿನಿವಿಧಾನಸೌಧದ ಲಿಫ್ಟ್ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಳಗ್ಗೆ 10.30ಕ್ಕೆ ಈ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್ ಹತ್ತಿದ್ದರು. ಹಿರಿಯ ಮಹಿಳೆ ಮತ್ತು ಇಬ್ಬರು ಹಿರಿಯ ಪುರುಷರು ಲಿಫ್ಟ್ನಲ್ಲಿ ತೆರಳಿದ್ದರು. ಲಿಫ್ಟ್ ಮೇಲೇರಿದ ಸ್ವಲ್ಪ ಕ್ಷಣದಲ್ಲಿ ನಿಂತುಕೊಂಡಿತ್ತು.
![firefighters rescue three people, firefighters rescue three people from lift, firefighters rescue three people from lift in Mangaluru, Mangaluru Vidhanasoudha, Mangaluru Vidhanasoudha news, ಲಿಫ್ಟ್ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ, ಮಿನಿವಿಧಾನಸೌಧದ ಲಿಫ್ಟ್ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ, ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ, ಮಂಗಳೂರಿನ ಮಿನಿವಿಧಾನಸೌಧ, ಮಂಗಳೂರಿನ ಮಿನಿವಿಧಾನಸೌಧ ಸುದ್ದಿ,](https://etvbharatimages.akamaized.net/etvbharat/prod-images/12402948_ddeed.jpg)
ಲಿಫ್ಟ್ನಲ್ಲಿ ಮೂವರು ಸಿಲುಕಿಕೊಂಡು ಗಾಬರಿಗೊಂಡಿದ್ದರು. ಈ ಹಿನ್ನೆಲೆ ಅಧಿಕಾರಿಗಳು ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಿಫ್ಟ್ನಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ. ತಾಂತ್ರಿಕ ದೋಷದಿಂದ ಲಿಫ್ಟ್ ಕೆಟ್ಟಿರಬಹುದೆಂದು ಶಂಕಿಸಲಾಗಿದೆ.
![firefighters rescue three people, firefighters rescue three people from lift, firefighters rescue three people from lift in Mangaluru, Mangaluru Vidhanasoudha, Mangaluru Vidhanasoudha news, ಲಿಫ್ಟ್ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ, ಮಿನಿವಿಧಾನಸೌಧದ ಲಿಫ್ಟ್ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ, ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ, ಮಂಗಳೂರಿನ ಮಿನಿವಿಧಾನಸೌಧ, ಮಂಗಳೂರಿನ ಮಿನಿವಿಧಾನಸೌಧ ಸುದ್ದಿ,](https://etvbharatimages.akamaized.net/etvbharat/prod-images/12402948_rrdd.jpg)