ETV Bharat / state

ಮಂಗಳೂರಲ್ಲಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಹಳೇ ದ್ವೇಷದ ಹಿನ್ನೆಲೆ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕಬಕ ಬಳಿಯ ಕಲ್ಲಂದಡ್ಕದಲ್ಲಿ ನಡೆದಿದೆ.

author img

By

Published : Nov 26, 2019, 9:19 PM IST

Firing on a young man in Puttur
ಕಬಕದಲ್ಲಿ ಯುವಕನ ಮೇಲೆ ಗುಂಡಿನ ದಾಳಿ

ಮಂಗಳೂರು: ಹಳೇ ದ್ವೇಷದ ಹಿನ್ನೆಲೆ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕಬಕ ಬಳಿಯ ಕಲ್ಲಂದಡ್ಕದಲ್ಲಿ ನಡೆದಿದೆ.

ಕಬಕ ಸಮೀಪದ ಕೊಡಿಪ್ಪಾಡಿ ಗ್ರಾಮ ಕಲ್ಲಂದಡ್ಕ ನಿವಾಸಿ ಖಾದರ್ ಎಂಬುವರ ಮೇಲೆ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಖಾದರ್​ ಎದೆಗೆ ಗುಂಡು ತಗುಲಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ವರ್ಷ ತಂಡವೊಂದರ ಜೊತೆ ಖಾದರ್ ಗಲಾಟೆ ನಡೆಸಿದ್ದು, ಈ ಹಿನ್ನೆಲೆ ದ್ವೇಷ ತೀರಿಸಿಕೊಳ್ಳಲು ಗುಂಡಿನ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಖಾದರ್ ತನ್ನ ಮನೆಯಲ್ಲಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡದ ಸದಸ್ಯನೊಬ್ಬ ಮನೆಯ ಹೊರಗೆ ಕರೆದುಕೊಂಡು ಬಂದಿದ್ದಾನೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ನೋಂದಣಿಯ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಮಂಗಳೂರು: ಪೂರ್ವದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಗುಂಡಿನ ದಾಳಿ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಲ್ಲಂದಡ್ಕದಲ್ಲಿ ನಡೆದಿದೆ.Body:

ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿ ಖಾದರ್ (45 ) ಎಂಬವರ ಗುಂಡಿನ ದಾಳಿ ನಡೆದಿದೆ. ಎದೆಗೆ ಗುಂಡು ತಗುಲಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ವರ್ಷ ತಂಡವೊಂದರ ಜೊತೆಗೆ ಖಾದರ್ ಗಲಾಟೆ ನಡೆದಿದ್ದು ಗುಂಡಿನ ದಾಳಿ ಇದರ ಮುಂದುವರಿದ ಭಾಗ ಎಂದು ಶಂಕಿಸಲಾಗಿದೆ.

ಖಾದರ್ ಕೊಡಿಪ್ಪಾಡಿ ಕಲ್ಲಂದಡ್ಕದ ಮನೆಯಲ್ಲಿ ಇದ್ದ ವೇಳೆ ಕಾರಿನಲ್ಲಿ ಬಂದ ತಂಡವೊಂದರ ಸದಸ್ಯನೊಬ್ಬ ಮನೆಯ ಹೊರಗೆ ಕರೆದುಕೊಂಡು ಬಂದಿದ್ದು ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಗುಂಡಿನ ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ ದ ನೊಂದಾಣಿಯ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.