ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ದಿನಗಳ ಬಳಿಕ ವ್ಯಕ್ತಿಯೊಬ್ಬನಲ್ಲಿ ಕೊರೊನಾ ದೃಢಪಟ್ಟಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ಉಪ್ಪಿನಂಗಡಿಯ 39 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮಾ.28 ರಂದು ದೆಹಲಿಯಿಂದ ಬಂದಿರುವ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.
ಇವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 13 ಪ್ರಕರಣಗಳು ದೃಢಪಟ್ಟಿದ್ದು 9 ಮಂದಿ ಗುಣಮುಖರಾಗಿದ್ದಾರೆ. ಇಂದು ಕೊರೊನಾ ದೃಢಪಟ್ಟ ವ್ಯಕ್ತಿ ಸೇರಿದಂತೆ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.