ಕಡಬ : ಕಡಬ ತಾಲೂಕು ಪಂಚಾಯಿತಿಯ ಪ್ರಥಮ ಸಭೆಯು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಹೊಸದಾಗಿ ಕಡಬ ತಾ.ಪಂ ಆಗಿ ಆರಂಭಗೊಂಡಿದ್ದು ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಅಭಿವೃದ್ಧಿಗೆ ಪೂರಕವಾದ ಕ್ರಿಯಾ ಯೋಜನೆ ತಯಾರಿಸಬೇಕಾಗಿದೆ. ತಾತ್ಕಾಲಿಕ ಅಭಿವೃದ್ಧಿ ಯೋಜನೆ ಕೈಗೊಳ್ಳದೆ ತಾಲೂಕಿಗೆ ಬೇಕಾದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ ಎಂದರು.
ಈ ಸಭೆಗೆ ಕಡಬ ತಾಲೂಕಿಗೆ ಸಂಬಂಧಿಸಿದ ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಕರೆಯದೇ ಇರುವುದಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.