ಮಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಇಂದಿನಿಂದ ನಾಮಪತ್ರ ಸ್ವೀಕಾರ ಆರಂಭವಾಗಿದ್ದು, ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆಯಾಗಿದೆ.
ಲೋಕ ತಾಂತ್ರಿಕ್ ಜನತಾದಳ ಅಭ್ಯರ್ಥಿಯಾಗಿ ಸುಪ್ರೀತ್ ಪೂಜಾರಿ ಇಂದು ದಕ್ಷಿಣಕನ್ನಡ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಎಪ್ರಿಲ್ 18 ಕ್ಕೆ ನಡೆಯುವ ಲೋಕಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿರುವುದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.