ETV Bharat / state

ನಾಡದೋಣಿ ಮೀನುಗಾರರಿಗೆ ನಿಗದಿತ ಸ್ಥಳಗಳಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ

ದ.ಕ. ಜಿಲ್ಲೆಯಲ್ಲಿ ನಾಡದೋಣಿ ಮೀನುಗಾರಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ‌ಕೊರೊನಾ ಸೋಂಕು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಯಿತು.

District Collector Sindhu b. Rupesh
ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್
author img

By

Published : Apr 13, 2020, 8:07 AM IST

ಮಂಗಳೂರು: ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಯು ಎಪ್ರಿಲ್ 12ರಿಂದ ಆರಂಭಗೊಂಡಿದೆ. ಆದರೆ ನಿಗದಿತ ಸ್ಥಳಗಳಲ್ಲಿ ಮಾತ್ರ ಮೀನು ಮಾರಾಟಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಹೇಳಿದರು.

ದ.ಕ. ಜಿಲ್ಲೆಯಲ್ಲಿ ನಾಡದೋಣಿ ಮೀನುಗಾರಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ‌ಕೊರೊನಾ ಸೋಂಕು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಯಿತು. ನಾಡದೋಣಿ ಮೀನುಗಾರರು ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಬೇಕು. ಮೀನು ಖರೀದಿ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು. ಕರಾವಳಿ ರಕ್ಷಣಾ ಪೊಲೀಸರು ಈ ಬಗ್ಗೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ಇನ್ನು ಮೀನುಗಾರರು ಮೀನು ಹಿಡಿದು ತಂದು ಚಿಲ್ಲರೆಯಾಗಿ ಮಾರಾಟ ಮಾಡುವಂತಿಲ್ಲ. ನಿಗದಿತ ಸ್ಥಳಕ್ಕೆ ದೋಣಿ ತಂದು, ಹರಾಜು ಕೂಗಿ, ನಿಗದಿಪಡಿಸಿದ ಖರೀದಿದಾರರಿಗೆ ಮಾತ್ರ ಮಾರಾಟ ಮಾಡಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲೆಯ ಒಟ್ಟು 11 ಸ್ಥಳಗಳಾದ ಬೈಕಂಪಾಡಿ, ಗುಡ್ಡಕೊಪ್ಲ, ಮುಕ್ಕ, ಸಸಿಹಿತ್ಲು, ಸುಲ್ತಾನ್ ಬತ್ತೇರಿ, ಹೊಯಿಗೆ ಬಜಾರ್, ಉಳ್ಳಾಲ ಕೋಡಿ, ಕೋಟೆಪುರ, ಮೊಗವೀರಪಟ್ಣ, ಉಳ್ಳಾಲ, ಸೋಮೇಶ್ವರಗಳಲ್ಲಿ ನಾಡದೋಣಿಯಲ್ಲಿ ತಂದ ಮೀನುಗಳನ್ನು ಮಾರಾಟ ಮಾಡಲು ಸ್ಥಳಗಳನ್ನು ನಿಗದಿಪಡಿಸಲಾಯಿತು.

ಇನ್ನು ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರೂಪಾ, ಡಿಸಿಪಿಗಳಾದ ಅರುಣಾಂಶು ಗಿರಿ, ಲಕ್ಷ್ಮೀಗಣೇಶ್, ಉಪವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ, ಮೀನುಗಾರಿಕೆ ಉಪನಿರ್ದೇಶಕ ಹರೀಶ್, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.