ETV Bharat / state

ಸೆ.1ರಿಂದ ಮಂಗಳೂರಿನಲ್ಲಿ ಮೀನುಗಾರಿಕೆ ಪ್ರಾರಂಭ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿರುವುದರಿಂದ ಸೆಪ್ಟೆಂಬರ್ ತಿಂಗಳಿಂದ ಮೀನುಗಾರಿಕೆ ಪ್ರಾರಂಭ ಮಾಡಲಾಗುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

Mangalore
ಸೆ.1ರಿಂದ ಮಂಗಳೂರಿನಲ್ಲಿ ಮೀನುಗಾರಿಕೆ ಪ್ರಾರಂಭ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ
author img

By

Published : Aug 12, 2020, 7:42 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದ್ದ ಮೀನುಗಾರಿಕೆ ಸೆ.1 ರಿಂದ ಮತ್ತೆ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕೆ ಪುನರಾರಂಭ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ.1 ರಿಂದ ಮೀನುಗಾರಿಕೆ ಪ್ರಾರಂಭ ಮಾಡುವಂತೆ ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ, ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮುಂದಿನ ಸೆಪ್ಟೆಂಬರ್ ತಿಂಗಳಿಂದ ಮೀನುಗಾರಿಕೆ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಮೀನುಗಾರಿಕೆಯಲ್ಲಿ ಶೇ.75 ರಷ್ಟು ಕಾರ್ಮಿಕರು ಹೊರ ರಾಜ್ಯದವರಾಗಿದ್ದು, ಅವರು ರಾಜ್ಯಕ್ಕೆ ಆಗಮಿಸುವ ಮೊದಲು ಸೇವಾ ಸಿಂಧೂವಿನಲ್ಲಿ ಅರ್ಜಿ ಸಲ್ಲಿಸಬೇಕು. ರಾಜ್ಯ ಪ್ರಯಾಣ ಬೆಳಸುವವರು ಕೊರೊನಾ ಪರೀಕ್ಷೆಗೆ ಒಳಗಾಗಿ ನೆಗೆಟಿವ್ ವರದಿ ಬಂದ ಕಾರ್ಮಿಕರು ಮಾತ್ರ ನಮ್ಮ ಜಿಲ್ಲೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಕೊರೊನಾ ಮಾರ್ಗಸೂಚಿಯಂತೆ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್​​ನಲ್ಲಿ ಇರಬೇಕು. ಬರುವ ಕಾರ್ಮಿಕರ ಜವಾಬ್ದಾರಿಗೆ ಸಂಬಂಧಿಸಿದ ಮೀನುಗಾರಿಕೆ ಮಾಲೀಕರು ನೋಡಿಕೊಳ್ಳಬೇಕು ಎಂದರು.

ಹೊರ ರಾಜ್ಯದಿಂದ ಬಂದವರಿಗೆ ಕೊರೊನಾ ಪರೀಕ್ಷೆಯನ್ನು ಜಿಲ್ಲಾಡಳಿತದಿಂದ ಉಚಿತವಾಗಿ ನಡೆಸಿ ಬೋಟ್​​ನಲ್ಲಿ 3 ಮೀಟರ್ ಅಂತರ ಕಾಯ್ದುಕೊಂಡು ಹೋಂ ಕ್ವಾರಂಟೈನಲ್ಲಿ ಇರಲು ಅವಕಾಶ ನೀಡಲಾಗಿದೆ. ಇದರ ಜವಾಬ್ದಾರಿ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು. ಮಾರುಕಟ್ಟೆಯನ್ನು ನಿತ್ಯ ಸ್ಯಾನಿಟೈಸರ್ ಮಾಡುವುದು ಕಡ್ಡಾಯವಾಗಿದ್ದು, ಮುಂದಿನ ದಿನದಲ್ಲಿ ಮೀನುಗಾರಿಕೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಮಾತನಾಡುತ್ತಾ ಧಕ್ಕೆಯಲ್ಲಿ ಚಿಲ್ಲರೆ ವ್ಯವಹಾರಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇಲ್ಲಿ ನಿತ್ಯ 6 ರಿಂದ 7 ಸಾವಿರ ಜನರು ವ್ಯವಹಾರದಲ್ಲಿ ತೊಡಗಿಕೊಳ್ಳುತ್ತಾರೆ. ಅವರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸುವ ಜೊತೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಮೀನುಗಾರಿಕೆ ಸಂಘದಿಂದ ನೇಮಕಗೊಂಡಿರುವ ತಂಡದವರು ಕ್ರಮಕೈಗೊಳ್ಳಬೇಕು. ತಂಡದ ರಚನೆಗೆ ಜಿಲ್ಲಾಡಳಿತದ ಕಡೆಯಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಾರಿ, ಪಾರ್ಶ್ವನಾಥ, ದಿನೇಶ್ ಕುಮಾರ್ ಕಳ್ಳೇರ, ವಿವಿಧ ಸಂಘದ ಅಧ್ಯಕ್ಷರು. ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.