ETV Bharat / state

ಮಂಗಳೂರಲ್ಲಿ ಪ್ರತ್ಯೇಕ ಘಟನೆ: ನೀರಿನ ಬಕೆಟ್​ಗೆ ಬಿದ್ದು ಮಗು ಸಾವು, ಡ್ರೈನೇಜ್ ಪಿಟ್​ನಲ್ಲಿ ಮಹಿಳೆ ಶವ ಪತ್ತೆ - ಹೆದ್ದಾರಿ ಗುಂಡಿಗೆ ವ್ಯಕ್ತಿ ಬಲಿ

ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಘಟನೆಗಳಲ್ಲಿ ನೀರಿನ ಬಕೆಟ್​ಗೆ ಬಿದ್ದು ಮಗು ಸಾವನ್ನಪ್ಪಿದ್ದು, ಡ್ರೈನೇಜ್ ಪಿಟ್​ನಲ್ಲಿ ಮಹಿಳೆ ಶವ ಪತ್ತೆಯಾಗಿದೆ.

Five separate incidents  Death injury arrests in Mangalore  Mangaluru crime news  ಐದು ಪ್ರತ್ಯೇಕ ಘಟನೆಗಳು  ಸಾವು ನೋವು ಬಂಧನ  ಮಂಗಳೂರು ಜಿಲ್ಲೆಯಲ್ಲಿ ಐದು ಪ್ರತ್ಯೇಕ ಘಟನೆ  ಕೆಲವರ ಬಂಧನವಾಗಿರುವುದು ಬೆಳಕಿಗೆ  20 ತಿಂಗಳ ಮುದ್ದಾದ ಮಗು ಸಾವು  ಶಾಲೆ ಬಳಿ ಪೊಲೀಸರಿಂದ ದಿಢೀರ್ ದಾಳಿ  ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ  ಹೆದ್ದಾರಿ ಗುಂಡಿಗೆ ವ್ಯಕ್ತಿ ಬಲಿ  ಡ್ರೈನೇಜ್ ಪಿಟ್​ನಲ್ಲಿ ಮಹಿಳೆಯ ಶವ ಪತ್ತೆ
ಐದು ಪ್ರತ್ಯೇಕ ಘಟನೆಗಳು, ಸಾವು-ನೋವು ಬಂಧನ
author img

By

Published : Jul 20, 2023, 3:20 PM IST

Updated : Jul 20, 2023, 9:20 PM IST

ಮಂಗಳೂರು: ನೀರು ತುಂಬಿದ್ದ ಬಕೆಟ್​ಗೆ ಬಿದ್ದು 20 ತಿಂಗಳ ಮಗುವೊಂದು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಾವೂರು ಎಂಬಲ್ಲಿ ವರದಿಯಾಗಿದೆ. ಮೂಲತಃ ಜಾರ್ಖಂಡ್ ನಿವಾಸಿ ಸದ್ಯ ಕಾವೂರು ಮಸೀದಿ ಬಳಿ ವಾಸವಿರುವ ಫಿರೋಜ್​ ಅನ್ಸಾರಿ ಮತ್ತು ಕಿತಾಬುನ್ ದಂಪತಿಯ ಪುತ್ರಿ ಆಯಿಶಾ ಮೃತಪಟ್ಟಿದೆ.

ಬುಧವಾರ ಸಂಜೆ ಮನೆಯಲ್ಲಿ ಅರ್ಧ ನೀರು ತುಂಬಿಸಿಟ್ಟಿದ್ದ ಬಕೆಟ್ ಬಳಿ ಮಗು ಆಟವಾಡುತ್ತಿತ್ತು. ಈ ವೇಳೆ ಮಗು ಬಕೆಟ್​ಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ. ಈ ಘಟನೆ ಸಂಬಂಧ ಕಾವೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಡ್ರೈನೇಜ್ ಪಿಟ್​ನಲ್ಲಿ ಮಹಿಳೆಯ ಶವ ಪತ್ತೆ: ಮೂಲ್ಕಿ ಬಳಿಯ ಪಡುಪಣಂಬೂರಿನ ಮನೆಯೊಂದರ ಹಿಂದುಗಡೆ ಇರುವ ಡ್ರೈನೇಜ್‌ ಪಿಟ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಪುಷ್ಪರಾಜ್ ಅಮೀನ್ ಎಂಬುವರ ಮನೆಯ ಹಿಂದುಗಡೆ ಇರುವ ಡ್ರೈನೇಜ್ ಪಿಟ್‌ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಸ್ಥಳೀಯ ಕಲ್ಲಾಪು ನಿವಾಸಿ ನಾಗಮ್ಮ ಶೆಟ್ಟಿಗಾರ್ (85) ಎಂದು ಗುರುತಿಸಲಾಗಿದೆ.

ಕೆಲವು ತಿಂಗಳ ಹಿಂದೆ ನಾಗಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಇವರ ನಾಪತ್ತೆ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮನೆಯ ಮಾಲೀಕರು ಮುಂಬೈಯಲ್ಲಿದ್ದು, ಆಗಾಗ ಬಂದು ಹೋಗುತ್ತಿದ್ದರು. ಮನೆಯ ಹಿಂದಿನಿಂದ ವಿಪರೀತ ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ದೂರಿದ್ದರು. ಬಳಿಕ ಸಂಶಯಗೊಂಡ ಸ್ಥಳೀಯರು ಪೊಲೀಸರ ಮೂಲಕ ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೆದ್ದಾರಿ ಗುಂಡಿಗೆ ವ್ಯಕ್ತಿ ಬಲಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿ - ಪಣಂಬೂರು ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಹೆದ್ದಾರಿಯ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಿಲ್ಲ ಎಂಬ ಕಾರಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನೋಟಿಸ್ ನೀಡಲು ಮಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಹೆದ್ದಾರಿಯ ಗುಂಡಿ ತಪ್ಪಿಸುವ ಭರದಲ್ಲಿ ಸ್ಕೂಟ‌ರ್ ಸವಾರ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿದರೆ, ಆ ರಸ್ತೆಯ ನಿರ್ವಹಣೆಯ ಹೊಣೆ ಹೊತ್ತಿರುವ ಇಲಾಖೆ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಆದರೆ, ರಸ್ತೆ ಗುಂಡಿಯಿಂದಾಗಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲೂ ಸಂಚಾರ ಪೊಲೀಸರು ಸಂಬಂಧ ಪಟ್ಟ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ಕೇಳಿಬಂದಿತ್ತು.

ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಕಮಿಷನರ್ ಕುಲದೀಪ್‌ ಕುಮಾರ್ ಆರ್ ಜೈನ್ ಪ್ರತಿಕ್ರಿಯಿಸಿ 'ಈ ಬಗ್ಗೆ ತನಿಖೆ ನಡೆಸುತ್ತೇವೆ. ಎನ್‌ಎಚ್‌ಎಐಗೂ ನೋಟಿಸ್‌ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳಂದೂರಿನ ಯುವಕನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಬಂಧಿತ ಆರೋಪಿ. ಈತನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಂಗಳವಾರ ಬೆಳಗ್ಗೆ ವಿದ್ಯಾರ್ಥಿನಿಯರಿಬ್ಬರು ಕಾಲೇಜಿಗೆ ತೆರಳುತ್ತಿದ್ದ ವೇಳೆ ಆರೋಪಿ ಅಸಭ್ಯವಾಗಿ ವರ್ತಿಸಿದ್ದ. ವಿದ್ಯಾರ್ಥಿನಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ಹೋಗಿ ಘಟನೆಯ ಕುರಿತು ಉಪನ್ಯಾಸಕಿಗೆ ತಿಳಿಸಿದ್ದರು. ಈ ಹಿನ್ನೆಲೆ ಕಾಲೇಜಿನ ಉಪನ್ಯಾಸಕಿ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಸಾಂಬಾರು ಚೆಲ್ಲಿದಕ್ಕೆ ಚೂರಿ ಎಸೆದ ವಿದ್ಯಾರ್ಥಿ: ಸಾಂಬಾರ್​ ಚೆಲ್ಲಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿಯೋರ್ವ ಸಹಪಾಠಿಯತ್ತ ಚೂರಿ ಎಸೆದ ಘಟನೆ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದ ಶಾಲೆಯೊಂದರಲ್ಲಿ ಬುಧವಾರ ನಡೆದಿದೆ. 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಬಟ್ಟೆಗೆ ಸಾಂಬಾರು ಚೆಲ್ಲಿದ ಕಾರಣಕ್ಕೆ ಜಗಳ ಆಗಿದ್ದು, ಆಗ ಓರ್ವ ವಿದ್ಯಾರ್ಥಿ ಮತ್ತೊಬ್ಬನಿಗೆ ಚೂರಿ ಎಸೆದ ಕಾರಣ ಎದೆಗೆ ಗಾಯವಾಗಿದೆ.

ಮಧ್ಯಾಹ್ನ ಊಟದ ಸಮಯದಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಗೆ ಕಲೆ ಆಯಿತೆಂದು ಕೋಪಗೊಂಡ ಮತ್ತೋರ್ವ ಕಪಾಳ ಮೋಕ್ಷ ಮಾಡಿದ್ದಾನೆ. ಬಳಿಕ ಮುಂದಕ್ಕೆ ಹೋಗುತ್ತಿರುವಾಗ ಪೆಟ್ಟು ತಿಂದ ವಿದ್ಯಾರ್ಥಿಯು ತನ್ನ ಬ್ಯಾಗ್​​ನಿಂದ ಚೂರಿ ತೆಗೆದು ಆತನತ್ತ ಎಸೆದಿದ್ದಾನೆ. ಆಗ ಚೂರಿಯು ಎದೆ ಭಾಗದಿಂದ ಸ್ವಲ್ಪ ಪಕ್ಕಕ್ಕೆ ತಗುಲಿತ್ತು. ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಘಟನೆಯ ಮಾಹಿತಿ ಪಡೆದ ದಕ್ಷಿಣ ಉಪ‌ ವಿಭಾಗ ಎಸಿಪಿ, ಕೊಣಾಜೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಸೇರಿದಂತೆ ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಶಾಲೆಗೆ ಭೇಟಿ ನೀಡಿ ಬಾಲಕನಿಗೆ ಬುದ್ದಿಮಾತು ಹೇಳಿದ್ದಾರೆ.

ಓದಿ: ವಸ್ತುಗಳನ್ನು ಆನ್ಲೈನ್​ನಲ್ಲಿ ಖರೀದಿ ಮಾಡಿ ಮಾರಾಟ ಮಾಡಿದರೆ ಕಮಿಷನ್ ನೀಡುವ ಆಮಿಷ.. ಮಹಿಳೆಗೆ 18.66 ಲಕ್ಷ ವಂಚನೆ

Last Updated : Jul 20, 2023, 9:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.