ಬೆಳ್ತಂಗಡಿ (ದಕ್ಷಿಣ ಕನ್ನಡ): ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸೇವಾ ಸಂಘದ ವತಿಯಿಂದ ಸಂಕಷ್ಟದಲ್ಲಿರುವ ತಮ್ಮ ಸಮುದಾಯದ ಅರ್ಹ 2000 ಬಡ ಕುಟುಂಬಗಳಿಗೆ 7,50,000 ಮೌಲ್ಯದ ಆಹಾರ ಸಾಮಗ್ರಿಗಳ ಕಿಟ್ ವಿತರಣೆಗೆ ಮಾಜಿ ಶಾಸಕ ವಸಂತ ಬಂಗೇರ ಸಾಂಕೇತಿಕವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊರೊನಾ ಸೋಂಕಿನಿಂದ ನಮ್ಮನ್ನು ನಾವು ರಕ್ಷಿಸಿಕೊಂಡು ಇತರರನ್ನು ಬದುಕಲು ಬಿಡಬೇಕಾಗಿದೆ ಅದಕ್ಕಾಗಿ ಸರಕಾರದ ನಿಯಮಗಳನ್ನು ಪಾಲಿಸೋಣ. ಅನಗತ್ಯವಾಗಿ ಮನೆಯಿಂದ ಹೊರಬಂದು ತಿರುಗಾಡಬೇಡಿ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.
ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಪದ್ಮನಾಭ ಮಾನಿಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ಪ್ರಭಾಕರ ಬಂಗೇರ, ಪಿತಾಂಬರ ಹೆರಾಜೆ, ಮನೋಹರ್ ಕುಮಾರ್ ಇಳಂತಿಲ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.