ETV Bharat / state

ಆದಾಯಕ್ಕಿಂತ ಅಧಿಕ ಆಸ್ತಿ: ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿಗೆ 5 ವರ್ಷ ಜೈಲು ಶಿಕ್ಷೆ - ಈಟಿವಿ ಭಾರತ ಕನ್ನಡ

ಅಕ್ರಮ ಆಸ್ತಿ ಗಳಿಕೆ - ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿಗೆ ದಂಡ ಮತ್ತು 5 ವರ್ಷ ಜೈಲು ಶಿಕ್ಷೆ - ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಿಂದ ಆದೇಶ

Forest officer
ಅರಣ್ಯಾಧಿಕಾರಿಗೆ 5 ವರ್ಷ ಜೈಲು ಶಿಕ್ಷೆ
author img

By

Published : Jan 28, 2023, 10:03 AM IST

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಆರೋಪದಲ್ಲಿ ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗಿದೆ. ಅಧಿಕ ಪ್ರಮಾಣದ ಆಸ್ತಿ ಗಳಿಕೆಯ ಆರೋಪವು ಮೂರನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಕೋಟಿ ರೂ. ದಂಡವನ್ನು ವಿಧಿಸಿ ಆದೇಶಿಸಿದ್ದಾರೆ.

ಏನಿದು ಆರೋಪ..?: ಮಂಗಳೂರು ನಗರದ ಕೊಂಚಾಡಿ ನಿವಾಸಿ ಎಸ್.ರಾಘವ ಪಾಟಾಳಿ ಅವರು, ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯದಲ್ಲಿದ್ದರು. ಇವರು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ರಾಘವ​ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ 2011ರ ಜುಲೈ 21ರಂದು ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಎಸ್.ಉದಯ್ ಕುಮಾರ್ ಪ್ರಕರಣದ ಫಿರ್ಯಾದುದಾರರಾಗಿದ್ದರು‌. ಪ್ರಕರಣದ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ವಿಠಲ್​ ದಾಸ್ ಪೈ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ.

ಪ್ರಕರಣವನ್ನು ಕೈಗೆತ್ತಿಕೊಂಡ ಮೂರನೇ ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ವಿಚಾರಣೆ ನಡೆಸಿ ಆರೋಪಿ ತಪ್ಪಿತಸ್ಥ ಎಂದು ಆದೇಶಿಸಿದ್ದಾರೆ. ಈ ಸಂಬಂಧ ಆರೋಪಿ ರಾಘವಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 1.50 ಕೋಟಿ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ ಒಂದು ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಪ್ರಕರಣದಲ್ಲಿ ರಾಜ್ಯ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ಸರ್ಕಾರದ ಪರವಾಗಿ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಪಿಎಸ್‌ಐ ಹಗರಣದ ತನಿಖೆ ಕುರಿತ ವಿಚಾರಣೆಯಿಂದ ಹಿಂದೆ ಸರಿದ ಮುಖ್ಯ ನ್ಯಾಯಮೂರ್ತಿ ಅವರಿದ್ದ ಪೀಠ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.