ದಕ್ಷಿಣ ಕನ್ನಡ: ಅರಣ್ಯ ವೀಕ್ಷಕರೊಬ್ಬರು ಆಯತಪ್ಪಿ ಹೊಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗವಾದ ಸಂಪಾಜೆ ಸಮೀಪದ ತೊಡಿಕಾನ ಎಂಬಲ್ಲಿ ನಡೆದಿದೆ.
ಮೃತರು ಕೊಡಗು ಜಿಲ್ಲೆಯ ಅರಣ್ಯ ವೀಕ್ಷಕ ಚಿನ್ನಪ್ಪ (58 ವರ್ಷ ) ಎಂದು ಗುರುತಿಸಲಾಗಿದೆ. ಕೊಡಗಿನ ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋಗಿದ್ದ ಚಿನ್ನಪ್ಪ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳುಮೊಟ್ಟೆಯ ಹೊಳೆ ಬದಿಯಲ್ಲಿ ನೀರು ಕುಡಿಯಲು ತೆರಳಿದ್ದರು. ಈ ವೇಳೆ ಆಯತಪ್ಪಿ ಹೊಳೆಗೆ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮುಂದಿನ ಕ್ರಮ ಅನುಸರಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ: ತಾಯಿ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬರುತ್ತಿದ್ದಂತೆ ಮಗ ಸಾವು