ETV Bharat / state

'ಶೆಟ್ಟರ್‌ ಅವರಂಥ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ': ಧರ್ಮಸ್ಥಳದಲ್ಲಿ ಹೆಚ್​​ಡಿಕೆ

ಮಾಜಿ ಮುಖ್ಯಮಂತ್ರಿ ಹೆಚ್‌.​ಡಿ.ಕುಮಾರಸ್ವಾಮಿ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

former-chief-minister-hdk-visits-srikshetra-dharmasthala
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​​ಡಿಕೆ ಭೇಟಿ
author img

By

Published : Apr 16, 2023, 4:29 PM IST

Updated : Apr 16, 2023, 5:46 PM IST

ಧರ್ಮಸ್ಥಳದಲ್ಲಿ ಹೆಚ್​​ಡಿಕೆ

ಬೆಳ್ತಂಗಡಿ (ದಕ್ಷಿಣ ಕನ್ನಡ): ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಧರ್ಮಸ್ಥಳದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದು, ಇಂದು (ಭಾನುವಾರ) ಮುಂಜಾನೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಬಳಿಕ ಹೆಚ್‌ಡಿಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ದೇವರ ದರ್ಶನ ಪಡೆದು ಹೊರಬರುವ ವೇಳೆ ಅಲ್ಲಿ ನೆರೆದಿದ್ದ ಭಕ್ತರು, ಜೆಡಿಎಸ್‌ ಬೆಂಬಲಿಗರು ಹೆಚ್‌ಡಿಕೆ ಅವರಿಗೆ ಜೈಕಾರ ಹಾಕಿ ಹಸ್ತಲಾಘವ ಮಾಡಿದರು.

ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, "ಮುಂದಿನ ದಿನಗಳಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ದುರ್ಗಾಪರಮೇಶ್ವರೀ ತಾಯಿಯ ಆಶೀರ್ವಾದದಿಂದ ‌ರಾಜ್ಯದಲ್ಲಿ ಸುಸ್ಥಿರ ಆಡಳಿತ ಬರುವಂತೆ ಹಾಗೂ ದೇವರ ಅನುಗ್ರಹದಿಂದ‌ ನಾಡಿನ‌ ಜನತೆಗೆ ಒಳಿತಾಗಲಿ ಎಂದು ವಿಶೇಷ ಹೋಮ ಹವನ, ಪೂಜೆ ಮಾಡಿದ್ದೇನೆ. ಪಕ್ಷದ ಮತ್ತು ಎಲ್ಲ ವಿಚಾರಗಳ ಬಗ್ಗೆಯೂ ಸಂಕಲ್ಪ ಮಾಡಿದ್ದೇನೆ" ಎಂದರು.

ಇದನ್ನೂ ಓದಿ: ಶೆಟ್ಟರ್, ಸವದಿಯಂತಹ ಹತ್ತು ನಾಯಕರನ್ನು ಸೃಷ್ಟಿಸುವ ಶಕ್ತಿ ಬಿಜೆಪಿಗಿದೆ: ರಮೇಶ್​ ಜಾರಕಿಹೊಳಿ

ಜಗದೀಶ್ ಶೆಟ್ಟರ್ ರಾಜೀನಾಮೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, "ಜಗದೀಶ್ ಶೆಟ್ಟರ್ ಅವರ ರಾಜೀನಾಮೆ ಅದು ಅವರ ಪಕ್ಷದ ಆಂತರಿಕ ಬೆಳವಣಿಗೆ. ಅವರೊಬ್ಬ ಅನುಭವಸ್ಥ ರಾಜಕಾರಣಿ. ಜನಸಂಘದಿಂದಲೂ ಕೆಲಸ ಮಾಡಿರುವಂತವರು. ಅವರಂತವರೇ ಇಂತಹ ತೀರ್ಮಾನ ಮಾಡಿದ್ದಾರೆ ಅಂದ್ರೆ?. ಬಿಜೆಪಿ ಡಿಎನ್ಎ ಬಗ್ಗೆ ನಾನು ಈ ಮೊದಲೇ ಹೇಳಿದ್ದೆ. ಅದು ಈ ಸಮಯಕ್ಕೆ ಪೂರಕವಾಗಿದೆ. ಇನ್ನು ಜಗದೀಶ್ ಶೆಟ್ಟರಂತಹ ದೊಡ್ಡ ನಾಯಕರ ಅವಶ್ಯಕತೆ ನಮ್ಮ ಪಕ್ಷಕ್ಕಿಲ್ಲ. ಸಣ್ಣ ನಾಯಕರೇನಾದರೂ ಬಂದರೆ ಸ್ವಾಗತ" ಎಂದು ಸೂಚ್ಯವಾಗಿ ತಿಳಿಸಿದರು.

ಬೆಂಗಳೂರು ಬೊಮ್ಮನಹಳ್ಳಿ ಕ್ಷೇತ್ರದ ನಾರಾಯಣ ರಾಜು,‌ ವಿಧಾನ‌ ಪರಿಷತ್ ಶಾಸಕ ಎಸ್.ಎಲ್.ಭೋಜೇಗೌಡ ಹಾಗೂ ರಾಜ್ಯ ವಕ್ತಾರ ಹಾಗೂ ಮಾಧ್ಯಮ ಸಂಚಾಲಕ ಎಂ.ಬಿ.ಸದಾಶಿವ,‌ ಸೇರಿದಂತೆ ಇನ್ನಿತರರು ಇದ್ದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಪಾಲಿಕೆ ಸದಸ್ಯರು, ಪಕ್ಷದ ಪದಾಧಿಕಾರಿಗಳೊಂದಿಗೆ ಸಚಿವ ಪ್ರಹ್ಲಾದ್ ಜೋಶಿ ಸಭೆ

ಇತ್ತೀಚಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಿಎಂ: ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್​ 12 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: 'ನಮ್ಮ ಮನೆಯಿಂದಲೇ ನಮ್ಮನ್ನು ಹೊರಹಾಕಿದಂತಾಯಿತು'.. ರಾಜೀನಾಮೆ ಬಳಿಕ ಶೆಟ್ಟರ್​ ಹೀಗಂದ್ರು

Last Updated : Apr 16, 2023, 5:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.