ಮಂಗಳೂರು: ಎಸ್ಡಿಪಿಐ ಪಕ್ಷದ ಕಾರ್ಯಕರ್ತರು ಗ್ರಾಮ ಪಂಚಾಯತ್ ಚುನಾವಣೆ ಗೆಲುವಿನ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಕೆಲವು ಯುವಕರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಯಾವುದೇ ರೀತಿಯಲ್ಲಿ ತನಿಖೆ ನಡೆಸದೆ ಪೊಲೀಸರು ಅಮಾಯಕರನ್ನು ಬಂಧಿಸಿರುವುದು ಖಂಡನೀಯ ಎಂದು ಮಾಜಿ ಮೇಯರ್ ಕೆ.ಅಶ್ರಫ್ ಆಗ್ರಹಿಸಿದ್ದಾರೆ.
ಪೊಲೀಸರು ಈ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸದೆ ಅಮಾಯಕ ಯುವಕರನ್ನು ಬಂಧಿಸಿರುವುದು ಖಂಡನೀಯ. ಸಾಮಾಜಿಕ ತಾಣಗಳಲ್ಲಿ ಈ ಬಗ್ಗೆ ಪರ-ವಿರೋಧ ಚರ್ಚೆಗಳೂ ನಡೆಯುತ್ತಿದೆ. ಘಟನೆಯ ಸತ್ಯಾಸತ್ಯತೆ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ನೈಜ ಮಾಹಿತಿ ತಿಳಿಸದೇ ಇದ್ದದ್ದು ವ್ಯಾಪಕ ಸಂಶಯಕ್ಕೆ ಎಡೆಮಾಡಿ ಕೊಟ್ಟಿದೆ ಎಂದು ಅಶ್ರಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಬಂಧಿತರ ಬಿಡುಗಡೆಯಾಗದಿದ್ದರೆ ಎಸ್ಪಿ ಕಚೇರಿಗೆ ಮುತ್ತಿಗೆ : ಎಸ್ಡಿಪಿಐ ಮುಖಂಡರಿಂದ ಎಚ್ಚರಿಕೆ
ಪಾಕಿಸ್ತಾನಕ್ಕೆ ಝಿಂದಾಬಾದ್ ಕೂಗಿದ್ದೇ ಅದರೆ ಅದು ಖಂಡನೀಯ. ಘೋಷಣೆ ಕೂಗಿದವರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕಿದೆ. ಉಜಿರೆಯಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಮೊಳಗಿಸಿದ ಒರಿಜಿನಲ್ ವಿಡಿಯೋವನ್ನು ಪೊಲೀಸರು ಸಾರ್ವಜನಿಕರ ಮುಂದೆ ಇಡಬೇಕಾಗಿದೆ. ಸುಳ್ಳು ಪ್ರಕರಣ ದಾಖಲಿಸಿ, ದೌರ್ಜನ್ಯ ನಡೆಸದೇ ನಿಸ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಅಶ್ರಫ್ ಆಗ್ರಹಿಸಿದ್ದಾರೆ.