ETV Bharat / state

'ಶಿಕ್ಷಕರು, ಪಿಡಿಒ, ಕಾರ್ಮಿಕ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ' - ಗ್ರಾಮ ಪಂಚಾಯತಿ ಮಟ್ಟದಲ್ಲಿ ಕೊರೊನಾ ಸೋಂಕು

ಗ್ರಾಮ ಪಂಚಾಯತ್​ ಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಶಾಲಾ ಶಿಕ್ಷಕರು ಮತ್ತು ಗ್ರಾಮ ಪಂಚಾಯತ್​ಗಳ ಅಭಿವೃದ್ಧಿ ಅಧಿಕಾರಿ (ಪಿಡಿಓ) ಪಾತ್ರ ಮಹತ್ವದಾಗಿದ್ದು, ಇವರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಸರ್ಕಾರ ಕೂಡಲೇ ಪರಿಗಣಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಒತ್ತಾಯಿಸಿದ್ದಾರೆ.

Former Minister B. Ramanath Rai
ರಮಾನಾಥ ರೈ
author img

By

Published : May 18, 2021, 8:53 PM IST

ಬಂಟ್ವಾಳ: ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರ್ಕಾರದ ಎಲ್ಲ ವಿಶೇಷ ಸೌಲಭ್ಯ ನೀಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಓದಿ: ರಾಜ್ಯದಲ್ಲಿಂದು ಚೇತರಿಸಿಕೊಂಡವರೇ ಹೆಚ್ಚು.. 30,309 ಮಂದಿಗೆ ಸೋಂಕು, 525 ಜನ ಸಾವು

ಗ್ರಾಮ ಪಂಚಾಯತ್​ ಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಶಾಲಾ ಶಿಕ್ಷಕರು ಮತ್ತು ಗ್ರಾಮ ಪಂಚಾಯತ್​ಗಳ ಅಭಿವೃದ್ಧಿ ಅಧಿಕಾರಿ(ಪಿಡಿಓ)ಗಳ ಪಾತ್ರ ಮಹತ್ವದಾಗಿದೆ. ಇವರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಸರ್ಕಾರ ಕೂಡಲೇ ಪರಿಗಣಿಸಬೇಕು ಎಂದು ರಮಾನಾಥ ರೈ ಒತ್ತಾಯಿಸಿದ್ದಾರೆ.

ಇದೇ ರೀತಿಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಇನ್ನಿತರ ಕಾರ್ಮಿಕರೊಂದಿಗೆ ಸಂಪರ್ಕ ಹೊಂದಿರುವ ಮತ್ತು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕ ಇಲಾಖೆಯ ನೌಕರರಿಗೆ ಕೂಡ ಕೊರೊನಾ ವಾರಿಯರ್ಸ್ಗೆ ನೀಡಲಾಗುವ ಸೌಲಭ್ಯಗಳನ್ನು ನೀಡಬೇಕು ಎಂದವರು ಪತ್ರಿಕಾ ಹೇಳಿಕೆಯ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವು ಮಂದಿ ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಕೋವಿಡ್ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್ ಕಾರ್ಯಕ್ಕಾಗಿ ತೊಡಗಿಸಿಕೊಳ್ಳಲಾಗಿದೆ. ಇವರೆಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸುವುದು ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.