ETV Bharat / state

ಆಧಾರ್ ನೋಂದಣಿ ತೊಂದರೆ: ಕ್ರಮಕ್ಕೆ ರಮಾನಾಥ ರೈ ಒತ್ತಾಯ

ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆ ಮಾಜಿ ಸಚಿವ ಬಿ.ರಮಾನಾಥ ರೈ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಆಗಮಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಸೂಕ್ತ ಕ್ರಮಕ್ಕೆ ಅವರು ಒತ್ತಾಯಿಸಿದರು.

author img

By

Published : Sep 17, 2020, 5:30 PM IST

ಬಂಟ್ವಾಳ (ದಕ್ಷಿಣ ಕನ್ನಡ): ತಾಲೂಕಿನ ಬಿ.ಸಿ.ರೋಡಿನ ಮಿನಿವಿಧಾನಸೌಧದಲ್ಲಿ ಕಾರ್ಯಾಚರಿಸುವ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಯಲ್ಲಿ ಸಾರ್ವಜನಿಕರಿಗಾಗುತ್ತಿರುವ ಸಮಸ್ಯೆಯ ಹಿನ್ನಲೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಮಿನಿವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಆಧಾರ್ ಕಾರ್ಡ್ ಅವ್ಯವಸ್ಥೆ ಕುರಿತಾಗಿ ಸಾರ್ವಜನಿಕರಿಂದ ಬಂದ ದೂರಿನನ್ವಯ ತಾಲೂಕು ಕಚೇರಿಗೆ ಭೇಟಿ ನೀಡಿದ್ದಾಗಿ ತಿಳಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿದರಲ್ಲದೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಿನಿವಿಧಾನಸೌಧಕ್ಕೆ ರಮಾನಾಥ ರೈ ಭೇಟಿ

ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಕೂಡಲೇ ಸರಿಪಡಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಭೂ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ತಿಲಕ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.