ಮಂಗಳೂರು: ಮಂಗಳೂರು ಹಿಂಸಾಚಾರದ ಹಿನ್ನೆಲೆಯಲ್ಲಿ ಪ್ರಚೋದಾನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಸಚಿವ ಯು.ಟಿ. ಖಾದರ್ ವಿರುದ್ಧ ಎಫ್.ಐ.ಆರ್. ದಾಖಲಾಗಿದೆ.
ಬಿಜೆಪಿ ದಕ್ಷಿಣಕನ್ನಡ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೇಶ್ ಅವರು ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಯು.ಟಿ. ಖಾದರ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ಇದರ ಆಧಾರದಲ್ಲಿ ಪಾಂಡೇಶ್ಚರ ಠಾಣೆಯಲ್ಲಿ ಖಾದರ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.
ಮಾಜಿ ಸಚಿವ ಯು ಟಿ ಖಾದರ್ ಅವರು ಡಿ. 17ರಂದು ಕಾಂಗ್ರೆಸ್ನಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಉತ್ತರ ಭಾರತದಲ್ಲಿ ಆದಂತೆ ಕರ್ನಾಟಕದಲ್ಲೂ ಬೆಂಕಿ ಬೀಳಬಹುದು ಎಂದು ಹೇಳಿದ್ದರು ಎನ್ನಲಾಗ್ತಿದೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ವಿಚಾರದಲ್ಲಿ ಖಾದರ್ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು.