ETV Bharat / state

ಕೊರೊನಾ ನಿರ್ವಹಣೆಯಲ್ಲಿ ಎನ್​ಜಿಒಗಳಿಗೆ ಪ್ರಾಮುಖ್ಯತೆ ನೀಡಿಲ್ಲ: ಮಾಜಿ ಶಾಸಕ ಲೋಬೊ - ಮಾಜಿ ಶಾಸಕ ಜೆ. ಆರ್. ಲೋಬೋ ಆರೋಪ

ಎನ್​ಜಿಒ ಸಂಸ್ಥೆಗಳು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿಷ್ಠೆಯಿಂದ ಬಡ ಜನತೆಯ ಪರವಾಗಿ ಸೇವೆ ಸಲ್ಲಿಸುವ ಸಂಸ್ಥೆಗಳು. ಆದರೆ ಕೋವಿಡ್-19 ನಿರ್ವಹಣೆಯಲ್ಲಿ ಎನ್​ಜಿಒಗಳಿಗೆ ಸರಿಯಾದ ಪ್ರಾಮುಖ್ಯತೆಯನ್ನು ದ.ಕ ಜಿಲ್ಲಾಡಳಿತ ನೀಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಆರೋಪಿಸಿದರು.

Former MLA J R Lobo
ಮಾಜಿ ಶಾಸಕ ಜೆ. ಆರ್. ಲೋಬೋ
author img

By

Published : May 6, 2020, 8:55 PM IST

ಮಂಗಳೂರು: ಕೋವಿಡ್-19 ನಿರ್ವಹಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎನ್​ಜಿಒಗಳನ್ನು ಬಳಸಿಕೊಳ್ಳುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಆರೋಪಿಸಿದ್ದಾರೆ.

ಮಾಜಿ ಶಾಸಕ ಜೆ.ಆರ್.ಲೋಬೊ
ಮಂಗಳೂರಿನಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರೇತರ ಸಂಸ್ಥೆಗಳು ಉತ್ತಮ ಕೆಲಸ ಮಾಡುವ ಸಂಸ್ಥೆಗಳು. ಬಹಳ ವರ್ಷಗಳ ಹಿಂದಿನಿಂದಲೇ ಅವರು ವಿಕಲಚೇತನ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ವಿಪತ್ತು ನಿರ್ವಹಣೆ ಹಾಗೂ ಇನ್ನಿತರ ಸಾಮಾಜಿಕ ಚಟುವಟಿಕೆಗಳಲ್ಲಿ ಬಹಳ ನಿಷ್ಠೆಯಿಂದ ಕೆಲಸ ಮಾಡಿಕೊಂಡು ಬಂದಿವೆ. ಆದರೆ ಈ ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆಯಲ್ಲಿ ಅವರಿಗೆ ಸರಿಯಾದ ಪ್ರಾಮುಖ್ಯತೆಯನ್ನು ದ.ಕ ಜಿಲ್ಲಾಡಳಿತ ನೀಡುವಲ್ಲಿ ವಿಫಲವಾಗಿದೆ. ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ, ಅರೋಗ್ಯ ಹಾಗೂ ವಿಪತ್ತು ನಿರ್ವಹಣೆ ವಿಷಯದಲ್ಲಿ ಬಹಳಷ್ಟು ಪರಿಣತಿ ಹೊಂದಿರುವ ಹಲವಾರು ಸಂಸ್ಥೆಗಳಿವೆ. ಇಂತಹ ಸಂಸ್ಥೆಗಳಿಗೆ ಕೊರೊನಾ ವೈರಸ್ ನಿರ್ವಹಣೆಯಲ್ಲಿ ಅವಕಾಶ ನೀಡಿದಲ್ಲಿ ಜಿಲ್ಲಾಡಳಿತಕ್ಕೆ ಒಂದು ಬಲ ಬರುತ್ತಿತ್ತು. ಆದರೆ ಜಿಲ್ಲಾಡಳಿತ ಅದನ್ನು ಮಾಡಲು ವಿಫಲವಾಗಿದೆ ಎಂದರು.

ಎನ್ ಜಿಒ ಸಂಸ್ಥೆಗಳು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿಷ್ಠೆಯಿಂದ ಬಡ ಜನತೆಯ ಪರವಾಗಿ ಸೇವೆ ಸಲ್ಲಿಸುವ ಸಂಸ್ಥೆಗಳು. ಈ ಸಂದರ್ಭದಲ್ಲಿ ಅವರಿಗೆ ಅವಕಾಶ ನೀಡಿದ್ದಲ್ಲಿ ಅವರು ಜನರಿಗೆ ಕೇವಲ ಮಾಸ್ಕ್ ಮತ್ತು ಆಹಾರದ ಕಿಟ್​ಗಳನ್ನು ನೀಡುವುದರ ಜೊತೆಗೆ ಕೊರೊನಾ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಸಾಂತ್ವನ ಹಾಗೂ ಮಾಹಿತಿ ನೀಡುತ್ತಿದ್ದವು. ಇಂತಹ ಸಂದರ್ಭದಲ್ಲಿ ಸರ್ಕಾರ ಎನ್​ಜಿಒಗಳನ್ನು ಬಳಸುವ ಅನೇಕ ನಿದರ್ಶನಗಳಿವೆ. ಆದರೆ ಇಂದು ಇಂತಹ ಸಂಸ್ಥೆಗಳನ್ನು ಸಂಪೂರ್ಣವಾಗಿ ಮೂಲೆಗುಂಪು ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.