ETV Bharat / state

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ವಸಂತ ಬಂಗೇರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ - Belthangady government hospital

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿರುವ 6 ಡಯಾಲಿಸಿಸ್ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

Former MLA  vasantha Bangare visits
ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ
author img

By

Published : Sep 24, 2020, 12:02 PM IST

ಬೆಳ್ತಂಗಡಿ: ತಾಲೂಕು ಸಮುದಾಯ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸರಿಯಾಗಿ ಮಾಡುತ್ತಿಲ್ಲ. ಅಲ್ಲದೆ ಆಸ್ಪತ್ರೆಯಲ್ಲಿರುವ 6 ಮಷಿನ್​ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ ಪರಿಶೀಲಿಸಿತು.

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆ ಆಗುತ್ತಿದೆ. ಡಯಾಲಿಸಿಸ್ ಮಾಡುತ್ತಿರುವ 6 ಯಂತ್ರಗಳು ಹಾಳಾಗಿವೆ ಎಂಬ ದೂರಿನ ಅನ್ವಯ ಕಾಂಗ್ರೆಸ್ ನಿಯೋಗ ಆಸ್ಪತ್ರೆಗೆ ಭೇಟಿ ಪರಿಶೀಲಿಸಿದರು. ಈ ಸಂದಭದಲ್ಲಿ ಆಸ್ಪತ್ರೆಯ ಕೆಲವು ಅವ್ಯವಸ್ಥೆ ಬಗ್ಗೆ ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಯೊಬ್ಬರು ಬರುವಂತಹ ರೋಗಿಗಳ ಬಳಿ ಅತಿರೇಕದಿಂದ ವರ್ತಿಸುತ್ತಿದ್ದಾರೆ. ಕೆಲವು ಮದ್ದುಗಳನ್ನು ಬೇರೆಡೆಯಿಂದ ತರಲು ಹೇಳುತ್ತಾರೆ ಎಂಬ ಆರೋಪದಡಿಯಲ್ಲಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ವಸಂತ ಬಂಗೇರ, ಮುಂದಿನ ದಿನಗಳಲ್ಲಿ ತಿಂಗಳಿಗೊಮ್ಮೆ ಅಸ್ಪತ್ರೆಗೆ ಭೇಟಿ ನೀಡಿ ಇಲ್ಲಿ ಬರುವ ಬಡ ರೋಗಿಗಳಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು.

ಯಾರಿಗಾದರೂ ಇಲ್ಲಿ ತೊಂದರೆಯಾದಲ್ಲಿ ತಕ್ಷಣ ನನ್ನನ್ನು ಸಂಪರ್ಕಿಸಬಹುದು ಎಂದು ತಿಳಿಸಿದ ಮಾಜಿ ಶಾಸಕರು, ಆಸ್ಪತ್ರೆಯಲ್ಲಿ ಔಷಧಿ ದಾಸ್ತಾನು ಇಡಲು ಫ್ರಿಡ್ಜ್ ವ್ಯವಸ್ಥೆ ಹಾಗೂ ತುರ್ತು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ವ್ಯವಸ್ಥೆ ಇಲ್ಲದ್ದನ್ನು ಸಾರ್ವಜನಿಕರು ತಿಳಿಸಿದಾಗ ತಕ್ಷಣ ಡಿಹೆಚ್ಒ ಅವರಿಗೆ ಫೋನ್ ಮಾಡಿ ವಿವರ ಪಡೆದರು. ಈಗಾಗಲೇ ಫ್ರಿಡ್ಜ್ ತಗೊಳ್ಳಲು ತಿಳಿಸಿದ್ದೇವೆ ಎಂದಾಗ ವೈದ್ಯಾಧಿಕಾರಿ ವಿರುದ್ಧ ಗರಂ ಆದ ಬಂಗೇರ ಇದಕ್ಕೂ ಶಾಸಕರ ಅನುಮತಿ ಬೇಕೆ ಎಂದು ಪ್ರಶ್ನಿಸಿದರು. ಇನ್ನೆರಡು ದಿನಗಳಲ್ಲಿ ಫ್ರಿಡ್ಜ್ ತರಬೇಕು. ತಕ್ಷಣ ಆ್ಯಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಬೇಕೆಂದು ಆಗ್ರಹಿಸಿದರು.

ಡಯಾಲಿಸಿಸ್ ಮಾಡುವ 5 ಮಷಿನ್​ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಡಯಾಲಿಸಿಸ್ ಗೆ ಬರುವವರಿಗೆ ಯಾವುದೇ ತೊಂದರೆ ಆಗಿಲ್ಲ. ಒಂದು ಮಷಿನ್ ಕಳೆದ ಒಂದು ತಿಂಗಳಿನಿಂದ ತಾಂತ್ರಿಕ ಕಾರಣಗಳಿಂದ ಕಾರ್ಯನಿರ್ವಹಿಸುತ್ತಿರಲಿಲ್ಲ. ಅದೂ ಕೂಡ ಈಗಾಗಲೇ ಸರಿಯಾಗಿದ್ದು, ಎಲ್ಲಾ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ರೋಗಿಗಳಿಗೆ ಯಾವುದೇ ಸಮಸ್ಯೆ ಆಗುತ್ತಿಲ್ಲ ಮಾಜಿ ಶಾಸಕರಿಗೆ ಯಾರೋ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ರಂಜನ್ ಜಿ. ಗೌಡ, ಮನೋಹರ್ ಇಳಂತಿಲ, ಜಿ.ಪಂ ಸದಸ್ಯರುಗಳಾದ ಶೇಖರ್ ಕುಕ್ಕೇಡಿ, ನಮಿತ ಪೂಜಾರಿ, ಅಭಿನಂದನ್ ಹರೀಶ್ ಕುಮಾರ್, ಅನಿಲ್ ಪೈ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.