ETV Bharat / state

ವಿಶ್ವ ಕೊಂಕಣಿ ಸರ್ದಾರ್ ಬಸ್ತಿ ವಾಮನ ಶೆಣೈ ಇನ್ನಿಲ್ಲ..

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಜನವರಿ 3 ರಂದು(ನಾಳೆ) ಬೆಳಗ್ಗೆ 9 ರಿಂದ 10ರವರೆಗೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕ ಅವಕಾಶ ನೀಡಲಾಗುವುದು. ಮಧ್ಯಾಹ್ನ 12 ಗಂಟೆಗೆ ಬಂಟ್ವಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Basti Vamana Shenoy no more
ಬಸ್ತಿ ವಾಮನ ಶೆಣೈ ಇನ್ನಿಲ್ಲ
author img

By

Published : Jan 2, 2022, 3:51 PM IST

ಬಂಟ್ವಾಳ: ಮಂಗಳೂರು ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ವಿಶ್ವ ಕೊಂಕಣಿ ಸರ್ದಾರ್ (ನಾಯಕ) ಎಂದೇ ಖ್ಯಾತರಾದ ಬಂಟ್ವಾಳದ ಬಸ್ತಿ ವಾಮನ್ ಶೆಣೈ (88) ಅವರು ಇಹಲೋಕ ತ್ಯಜಿಸಿದ್ದಾರೆ.

ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಮಧ್ಯಾಹ್ನ ಸುಮಾರು 12.15ಕ್ಕೆ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ಜನವರಿ 3 ರಂದು(ನಾಳೆ) ಬೆಳಗ್ಗೆ 9 ರಿಂದ 10ರವರೆಗೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕ ಅವಕಾಶ ನೀಡಲಾಗುವುದು. ಮಧ್ಯಾಹ್ನ 12 ಗಂಟೆಗೆ ಬಂಟ್ವಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ವಾಮನ ಶೆಣೈ ಅವರ ಪರಿಚಯ

ಬಂಟ್ವಾಳದಲ್ಲಿ ಬಸ್ತಿ ಮಾಧವ ಶೆಣೈ ಮತ್ತು ಗೌರಿ ಅವರ ಪುತ್ರರಾಗಿ 1934ರ ನವೆಂಬರ್ 6ರಂದು ಜನಿಸಿದ್ದ ಶೆಣೈ ಅವರು, ಬಂಟ್ವಾಳ ಎಸ್.ವಿ.ಎಸ್. ವಿದ್ಯಾಸಂಸ್ಥೆಯಲ್ಲಿ ಹತ್ತನೇ ತರಗತಿ ಕಲಿತು, ತಂದೆಯವರೊಂದಿಗೆ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದರು.

ಸರಸ್ವತಿ ಕಲಾ ಪ್ರಸಾರಕ ಸಂಘ ಮತ್ತು ಸರಸ್ವತಿ ಸಂಗೀತ ಶಾಲೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು, ಬಂಟ್ವಾಳ ಯಶವಂತ ವ್ಯಾಯಾಮ ಶಾಲೆಯ ಸಕ್ರಿಯ ಸದಸ್ಯರಾಗಿದ್ದರು. ಕೊಂಕಣಿ ರಂಗಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ಮಾಧವ ಶೆಣೈ, ರೋಟರಿ ಜಿಲ್ಲೆಯಲ್ಲಿ ವಿಶೇಷ ಪ್ರಶಸ್ತಿ ಪಡೆದಿದ್ದರು. ಅವರ ನಾಯಕತ್ವ ಗುಣ ಮೆಚ್ಚಿ ಸಿಂಡಿಕೇಟ್ ಬ್ಯಾಂಕ್​ಗೆ ಸೇರಲು ತಿಳಿಸಿದ್ದರು.

ವೃತ್ತಿಯಿಂದ ನಿವೃತ್ತರಾದ ಬಳಿಕ ಸಂಪೂರ್ಣವಾಗಿ ಕೊಂಕಣಿ ಚಟುವಟಿಕೆಗಳಿಗೆ ಸಮಯ ಮೀಸಲಿಟ್ಟ ವಾಮನ ಶೆಣೈ, ಕರ್ನಾಟಕ ಕೊಂಕಣಿ ಭಾಷಾ ಮಂಡಲದ ಅಧ್ಯಕ್ಷರಾಗಿದ್ದ ಪೌಲ್ ಮೊರಾಸ್ ಅವರೊಂದಿಗೆ ಕೊಂಕಣಿ ಅಕಾಡೆಮಿ ಸ್ಥಾಪನೆಗೆ ಒತ್ತಾಯಿಸಲು ಜನರನ್ನು ಸಂಘಟಿಸುವ ಚಳವಳಿಯ ಕೊಂಕಣಿ ಜಾಥಾದ ಸಂಘಟನಾ ಕಾರ್ಯದರ್ಶಿ ಹುದ್ದೆಯನ್ನು ನಿರ್ವಹಿಸಿ ರಾಜ್ಯಾದ್ಯಂತ ಜಾಥಾ ಆಯೋಜಿಸಿದ್ದರು.

1993ರಲ್ಲಿ ಕರ್ನಾಟಕ ಕೊಂಕಣಿ ಭಾಷಾ ಮಂಡಲ ಅಧ್ಯಕ್ಷರಾಗಿದ್ದ ಅವರು, ವಿಶ್ವ ಕೊಂಕಣಿ ಸಮ್ಮೇಳನವನ್ನು ಆಯೋಜಿಸಿದ್ದರು. 1997ರಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನಿಯುಕ್ತರಾದ ಅವರು ಎರಡು ಅವಧಿಯಲ್ಲಿ ಅದರ ಅಧ್ಯಕ್ಷರಾಗಿದ್ದರು. 2004ರಲ್ಲಿ ಅಖಿಲ ಭಾರತ ಕೊಂಕಣಿ ಪರಿಷತ್ ಅಧ್ಯಕ್ಷರಾಗಿ ಆಯ್ಕೆಯಾದರು.

ಕೊಂಕಣಿ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಹಾಗೂ ಕೊಂಕಣಿ ಭಾಷಿಕರನ್ನು ವಿಶ್ವದಾದ್ಯಂತ ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಬಸ್ತಿ ವಾಮನ ಶೆಣೈ ಅವರಿಗೆ ವಿವಿಧ ಪ್ರಶಸ್ತಿ, ಸನ್ಮಾನ, ಗೌರವಗಳು ಸಂದಿವೆ.

ಇದನ್ನೂ ಓದಿ: ತಜ್ಞರ ಸಲಹಾ ಸಮಿತಿ ವರದಿಯಲ್ಲಿ ಲಾಕ್​ಡೌನ್ ಪ್ರಸ್ತಾಪ.. ರಾಜ್ಯಕ್ಕೆ ಮತ್ತೊಮ್ಮೆ ಬೀಳುತ್ತಾ ಬೀಗ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.