ETV Bharat / state

ಪುತ್ತೂರು: ಹಾರಾಡಿ ರೈಲ್ವೆ ನಿಲ್ದಾಣ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ - MLA Sanjiva Mathandur

ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಪುತ್ತೂರು ನಗರದ ಹಾರಾಡಿ ರೈಲ್ವೆ ನಿಲ್ದಾಣ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಶಿಲಾನ್ಯಾಸಕ್ಕೆ ತೆಂಗಿನಕಾಯಿ ಒಡೆಯುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.

haradi railway station road concreting
ಹಾರಾಡಿ ರೈಲ್ವೆ ನಿಲ್ದಾಣ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ
author img

By

Published : Nov 3, 2022, 7:35 AM IST

ಪುತ್ತೂರು: ನಗರದ ಹಾರಾಡಿ ರೈಲ್ವೆ ನಿಲ್ದಾಣ ರಸ್ತೆಯನ್ನು ಕಾಂಕ್ರಿಟೀಕರಣ ಮಾಡುವ ಮೂಲಕ ಪುತ್ತೂರು ನಗರಸಭೆ ವತಿಯಿಂದ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಡಬಲ್ ಇಂಜಿನ್ ಸರ್ಕಾರ ಇಂತಹ ಅಭಿವೃದ್ಧಿ ಕೆಲಸವನ್ನು ಮಾಡುವ ಮೂಲಕ ದೇಶದಲ್ಲಿ ಪರಿವರ್ತನೆ ಯುಗ ಪ್ರಾರಂಭಿಸಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಬುಧವಾರ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಹಾರಾಡಿ ರೈಲ್ವೆ ನಿಲ್ದಾಣ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಶಿಲಾನ್ಯಾಸಕ್ಕೆ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿ, ಶಿಲಾ ನಾಮಫಲಕ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಅವರ ತಂಡ ಕ್ರಿಯಾಶೀಲವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದೆ. ಪುತ್ತೂರಿನಲ್ಲಿ ರೈಲ್ವೆ ಸಂಚಾರಕ್ಕೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಆದರ್ಶ ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಪ್ರಸ್ತುತ ವಿವೇಕಾನಂದ ಕಾಲೇಜು ರಸ್ತೆ ರೈಲ್ವೆ ಬ್ರಿಡ್ಜ್ ಅಗಲೀಕರಣಕ್ಕೆ ಪ್ರಸ್ತಾಪಗಳು ಬಂದಿದ್ದು, ಕೆಲಸ ಮಾಡಲು ನಮ್ಮ ಸರ್ಕಾರ ಬದ್ಧವಿದೆ ಎಂದರು.

ಹಾರಾಡಿ ರೈಲ್ವೆ ನಿಲ್ದಾಣ ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ಶಾಸಕ ಸಂಜೀವ ಮಠಂದೂರು ಮಾತನಾಡಿ, ಈಗಾಗಲೇ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ 130 ಕೋಟಿ ರೂ ವೆಚ್ಚದಲ್ಲಿ ಜಲಸಿರಿ ಯೋಜನೆ, 25 ಕೋಟಿ ರೂ ವೆಚ್ಚದಲ್ಲಿ ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ರಸ್ತೆ ಅಭಿವೃದ್ಧಿ, 33 ಕೋಟಿ ರೂ ವೆಚ್ಚದಲ್ಲಿ ನಗರೋತ್ಥಾನ ಯೋಜನೆ, 70 ಕೋಟಿ ರೂ ವೆಚ್ಚದಲ್ಲಿ ಜೆಜೆಎಂ ಯೋಜನೆಯ ಕಾಮಗಾರಿಗಳು ನಡೆಯುತ್ತಿದೆ. ಅಲ್ಲದೇ, 18 ಎಕರೆ ಜಾಗವನ್ನು ಗುರುತಿಸಲಾಗಿದ್ದು, ಎರಡು ಸಾವಿರ ಬಡವರಿಗೆ ನಿವೇಶನ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ. ಬನ್ನೂರಿನಲ್ಲಿ ನ್ಯಾಯಾಲಯ ಕಟ್ಟಡ ಪ್ರಗತಿಯಲ್ಲಿದ್ದು, ಶೀಘ್ರ ಉದ್ಘಾಟನೆಗೊಳ್ಳಲಿದೆ ಎಂದ ಅವರು, ಸ್ವಚ್ಛತೆಯಲ್ಲಿ ನಗರಸಭೆ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಒಂದನೇ ಸ್ಥಾನಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೊಪ್ಪಳ: ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆ ಅಗೆದು ಗುಂಡಿ ತೋಡಿದ ರೈತ-ಪ್ರಯಾಣಿಕರ ಪರದಾಟ!

ಈ ಸಂದರ್ಭದಲ್ಲಿ ಪಿಎಂ ಸ್ವನಿಧಿ ಯೋಜನೆಯಡಿ 192 ಫಲಾನುಭವಿಗಳಿಗೆ ಗುರುತಿನ ಫಲಕ, ಪ್ರೋತ್ಸಾಹ ಪತ್ರ ವಿತರಣೆ, ಡಾ.ಬಿ.ಆರ್.ಅಂಬೇಡ್ಕರ್ ಯೋಜನೆಯಡಿ ತಲಾ 2 ಲಕ್ಷದಂತೆ ಹತ್ತು ಮಂದಿ ಫಲಾನುಭವಿಗಳಿಗೆ 20 ಲಕ್ಷ ರೂ., ವಾಜಪೇಯಿ ವಸತಿ ಯೋಜನೆಯಡಿ 1.20 ಲಕ್ಷದಂತೆ 16 ಫಲಾನುಭವಿಗಳಿಗೆ 19.20 ಲಕ್ಷ ರೂ. ಕಾರ್ಯಾದೇಶ ಪತ್ರ ವಿತರಣೆ ಮಾಡಲಾಯಿತು. ನಿರುಪಯುಕ್ತ ಸಾಮಗ್ರಿಗಳಿಂದ ಆಟಿಕೆಗಳು ಸೇರಿದಂತೆ ಇತರೆ ಪ್ರದರ್ಶಕ ಸಾಮಗ್ರಿಗಳನ್ನು ತಯಾರಿಸುವ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.

ಇದನ್ನೂ ಓದಿ: ಕಾಂಗ್ರೆಸ್​ನ ಎಲ್ಲಾ ನಾಟಕಗಳನ್ನು ಬಲ್ಲ ಏಕೈಕ ನಾಯಕ ಸಿದ್ದರಾಮಯ್ಯ: ನಳಿನ್​ ಕುಮಾರ್ ಕಟೀಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.