ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ಖಾಸಗಿ ಬಸ್ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಭಿನ್ನಕೋಮಿನ ಜೋಡಿಯನ್ನು ತಡೆದು ನೈತಿಕ ಪೊಲೀಸ್ಗಿರಿ ನಡೆಸಿದ ನಾಲ್ವರು ಭಜರಂಗದಳ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಅತ್ತಾವರದ ಬಾಲಚಂದ್ರ (28), ಕಂದುಕದ ಧನುಷ್ ಭಂಡಾರಿ (25), ಶಕ್ತಿನಗರದ ಜಯಪ್ರಶಾಂತ್ (27) ಮತ್ತು ಉರ್ವಮಾರಿಗುಡಿ ಕ್ರಾಸ್ ರೋಡ್ ಬಳಿಯ ಅನಿಲ್ ಕುಮಾರ್ (27) ಬಂಧಿತರು. ಇವರ ಮೇಲೆ ಈ ಹಿಂದೆಯು ವಿವಿಧ ಠಾಣೆಗಳಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು.
ಘಟನೆಯ ಹಿನ್ನೆಲೆ:
ಮಂಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ಹೊರಟ ಖಾಸಗಿ ಬಸ್ನಲ್ಲಿ ಭಿನ್ನ ಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿರುವ ಮಾಹಿತಿ ಪಡೆದ ಭಜರಂಗದಳ ಕಾರ್ಯಕರ್ತರು ನಗರದ ಪಂಪ್ವೆಲ್ ಬಳಿ ಬಸ್ ತಡೆದು ಇಬ್ಬರನ್ನೂ ಬಸ್ನಿಂದ ಕೆಳಗಿಳಿಸಿ ಹಲ್ಲೆ ನಡೆಸಿದ್ದರು. ಈ ವೇಳೆ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು, ಆತನನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆ ನಡೆದ ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದರು.
ಇದನ್ನೂ ಓದಿ : ಮನೆ ಮುಂದೆ ಸಿಗರೇಟ್ ಸೇದಬೇಡ ಎಂದಿದ್ದಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ!