ETV Bharat / state

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಲ್ವರು ಸೋಂಕಿತರು ಸಾವು - ನಾಲ್ವರು ಕೊರೊನಾ ಸೋಂಕಿತರು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 173 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಪ್ರಾಥಮಿಕ ಸಂಪರ್ಕದಿಂದ 21, ಐಎಲ್ಐನಿಂದ 91, ಸಾರಿ ಪ್ರಕರಣದಿಂದ 22, ವಿದೇಶ ಪ್ರವಾಸದಿಂದ 1 ಮಂದಿಗೆ ಕೊರೊನಾ ದೃಢಪಟ್ಟಿದೆ..

Dakshina Kannada district
ದಕ್ಷಿಣ ಕನ್ನಡ ಜಿಲ್ಲೆ
author img

By

Published : Jul 28, 2020, 10:18 PM IST

ಮಂಗಳೂರು : ಜಿಲ್ಲೆಯಲ್ಲಿ ಇಂದು ನಾಲ್ವರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 135ಕ್ಕೆ ಏರಿಕೆಯಾಗಿದೆ.

ಇಂದು ಸಾವನ್ನಪ್ಪಿದ ನಾಲ್ಕು ಮಂದಿಯ ಪೈಕಿ ಒಬ್ಬರು ಹಾಸನ, ಒಬ್ಬರು ಉತ್ತರಕನ್ನಡ ಜಿಲ್ಲೆಯವರಾಗಿದ್ದಾರೆ. ಇಬ್ಬರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರದ 84 ವರ್ಷದ ಗಂಡಸು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ 72 ವರ್ಷದ ಗಂಡಸು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 62 ವರ್ಷದ ಗಂಡಸು, 25 ವರ್ಷದ ಹೆಂಗಸು ಮೃತಪಟ್ಟವರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 173 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಪ್ರಾಥಮಿಕ ಸಂಪರ್ಕದಿಂದ 21, ಐಎಲ್ಐನಿಂದ 91, ಸಾರಿ ಪ್ರಕರಣದಿಂದ 22, ವಿದೇಶ ಪ್ರವಾಸದಿಂದ 1 ಮಂದಿಗೆ ಕೊರೊನಾ ದೃಢಪಟ್ಟಿದೆ.

38 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 5103 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 41 ಮಂದಿ ಗುಣಮುಖರಾಗಿದ್ದು, ಈವರೆಗೆ 2338 ಮಂದಿ ಗುಣಮುಖರಾಗಿದ್ದಾರೆ. 2632 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.