ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎಂಟು ವರ್ಷದ ಬಾಲಕ ಸೇರಿದಂತೆ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಇಂದು ಕೊರೊನಾ ದೃಢಪಟ್ಟ ಮೂವರಲ್ಲಿ ಇಬ್ಬರು ಮಹಾರಾಷ್ಟ್ರದಿಂದ ಬಂದವರಾಗಿದ್ದು ಒಬ್ಬರು ದುಬೈನಿಂದ ಬಂದಿದ್ದಾರೆ. ಮಹಾರಾಷ್ಟ್ರದಿಂದ ಬಂದ 52 ವರ್ಷದ ಪುರುಷ ಮತ್ತು 8 ವರ್ಷದ ಬಾಲಕನಲ್ಲಿ ಕೊರೊನಾ ಕಾಣಿಸಿಕೊಂಡಿದೆ.
ದುಬೈನಿಂದ ಬಂದಿರುವ 23 ವರ್ಷದ ಯುವಕನಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಕ್ವಾರಂಟೈನ್ ನಲ್ಲಿದ್ದ ಇವರ ಗಂಟಲುದ್ರವ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದ್ದು ಮೂವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಪಾಸಿಟಿವ್ ಬಂದವರ ಸಂಖ್ಯೆ 195ಕ್ಕೆ ಏರಿಕೆಯಾಗಿದೆ. ಇದರಲ್ಲಿ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವುದು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. 96 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 92 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.