ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕೃತ್ತು ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯು ಕೊರೊನಾ ಸೋಂಕು ದೃಢಪಟ್ಟು ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ವ್ಯಕ್ತಿಯೊಬ್ಬರು ಧೀರ್ಘಕಾಲಿನ ಯಕೃತ್ತು ಮತ್ತು ಮೂತ್ರಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಮೃತರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 4 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಆತ್ಮಹತ್ಯೆ ಪ್ರಕರಣ ಸೇರಿದಂತೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಇದರಲ್ಲಿ 26 ಸೋಂಕಿತರು ಗುಣಮುಖರಾಗಿ 37 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.