ETV Bharat / state

ಪುತ್ತೂರು:​ ರಿಯಾಲಿಟಿ ಶೋ ಹೆಸರಿನಲ್ಲಿ ಮಹಿಳೆಗೆ 12 ಲಕ್ಷ ರೂ. ವಂಚನೆ

ಪುತ್ತೂರು ತಾಲೂಕಿನ ನಿವಾಸಿಯೊಬ್ಬರಿಗೆ ರಿಯಾಲಿಟಿ ಶೋ ಹೆಸರಿನಲ್ಲಿ ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ.

ವಂಚನೆ
ವಂಚನೆ
author img

By ETV Bharat Karnataka Team

Published : Sep 21, 2023, 2:32 PM IST

Updated : Sep 21, 2023, 3:16 PM IST

ಮಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ ಹೆಸರಿನಲ್ಲಿ ಪುತ್ತೂರಿನ ಮಹಿಳೆಯೋರ್ವರಿಗೆ ರೂ. 12.93 ಲಕ್ಷ ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿಯಾದ ಝೀನತ್ ಬಾನು ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.‌ ದೂರಿನಲ್ಲಿ ಝೀನತ್ ಬಾನು ಅವರಿಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ಕರೆ ಮಾಡಿ ತಾನು ರಿಯಾಲಿಟಿ ಶೋ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದನು.

ನೀವು 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ಹೇಳಿದ್ದಲ್ಲದೆ ಈ ಹಣವನ್ನು ಪಡೆಯಲು ಟ್ಯಾಕ್ಸ್ ಕಟ್ಟಲು ಹಾಗೂ ಇನ್ನಿತರ ಚಾರ್ಜಸ್‌ ಕಾರಣ ಹೇಳಿ ಮಹಿಳೆಯಿಂದ 2022 ಮೇ ತಿಂಗಳಿನಿಂದ 2023 ಸೆಪ್ಟೆಂಬರ್ 13 ರವರೆಗಿನ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಸುಮಾರು ರೂ. 12,93,200 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಸದ್ಯ ಮಹಿಳೆ ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಮಂಗಳೂರು ಇತರ ಅಪರಾಧ ಪ್ರಕರಣಗಳು: ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು ಏಳು ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರದ ಬಜಾಲ್​ನ ಫೈಸಲ್ ನಗರದ ತಲ್ಲತ್ (39) ಬಂಧಿತ ಆರೋಪಿ. ಈತನನ್ನು ಬಂಧಿಸಿದ ಸಿಸಿಬಿ ಪೊಲೀಸರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ. ಆತನ ಕುರಿತು ಪೊಲಿಸರು ಮಾಹಿತಿ ನೀಡಿದ್ದು, ತಲ್ಲತ್​ನು ಹಲ್ಲೆ, ಕೊಲೆಯತ್ನ, ಅಪಹರಣ, ಹಫ್ತಾ ವಸೂಲಿ, ದರೋಡೆ, ಕೊಲೆ ಸಹಿತ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಈತನು 2004ನೇ ಇಸವಿಯಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದನು. ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮೊದಲಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್​ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂಧಿಯವರು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ: ಕೈ, ಕಾಲು ಕಟ್ಟಿ ಮನೆ ದರೋಡೆ; ₹1 ಕೋಟಿ ಮೌಲ್ಯದ ಚಿನ್ನ, ನಗದು ದೋಚಿ ದುಷ್ಕರ್ಮಿಗಳು ಪರಾರಿ

Last Updated : Sep 21, 2023, 3:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.