ಸುಳ್ಯ: ಬಿಜೆಪಿ ಯುವ ಮೋರ್ಚಾ ವತಿಯಿಂದ ಸುಳ್ಯದಲ್ಲಿ ಇಂದು ನಡೆದ ಉಚಿತ ಆಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಶಾಸಕ ಎಸ್. ಅಂಗಾರ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ತಾಲೂಕ ಪಂಚಾಯಿತಿ ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಯುವ ಮೋರ್ಚಾ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್, ಕಾರ್ಯದರ್ಶಿ ಸುನೀಲ್ ಕೇರ್ಪಳ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಇದ್ದರು.