ಮಂಗಳೂರು: ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಕಳೆದ ಬಾರಿ ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ದುಬಾರಿ ಹಣ ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಆದ ಕಾರಣ ಈ ಬಾರಿ ಕೊರೊನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ಮಾಡಲು ನಿರ್ಧರಿಸಲಾಗಿದೆ. ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಹಿಂದಿನಂತೆ ಆಗಬಾರದು ಎಂದು ಈ ನಿರ್ಣಯ ಮಾಡಿದ್ದೇವೆ ಎಂದು ಶಾಸಕರು ತಿಳಿಸಿದರು.
ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಬೋಳೂರಿನ ವಿದ್ಯುತ್ ಚಿತಾಗಾರದಲ್ಲಿ ಮಾಡಲಾಗುತ್ತಿತ್ತು. ಇದೀಗ ಅಲ್ಲಿದ್ದ ಒಂದು ಚಿತಾಗಾರವನ್ನು ಎರಡು ಚಿತಾಗಾರ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಟ್ಟಿಗೆಯಲ್ಲಿ ಅಗ್ನಿಸ್ಪರ್ಶ ಮಾಡಿ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಇದಕ್ಕೆ ತಗುಲುವ ವೆಚ್ಚವನ್ನು ಪಾಲಿಕೆ ಭರಿಸಲಿದೆ ಎಂದು ಶಾಸಕರು ತಿಳಿಸಿದರು.