ETV Bharat / state

'ಕೊರೊನಾದಿಂದ ಮೃತರಾದ್ರೆ ಅಂತ್ಯ ಸಂಸ್ಕಾರ ಬೋಳೂರು ಚಿತಾಗಾರದಲ್ಲಿಯೇ ನಡೆಯಲಿದೆ..'

ಲಾಕ್‌ಡೌನ್‍ ಸಮಸ್ಯೆಯಿಂದ ತಮ್ಮ ಊರಿಗೆ ತೆರಳಲಾಗದ ವಲಸೆ ಕಾರ್ಮಿಕರಿಗೆ ಅಂತರ್ ಜಿಲ್ಲೆಗಳ ನಡುವೆ ಪ್ರಯಾಣಿಸಲು ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತೆ.

Funeral for Corona infected will be held at Bolur
ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ
author img

By

Published : Apr 29, 2020, 7:58 PM IST

ಮಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಬೋಳೂರಿನ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾನ್ಯ ರೋಗಿಗಳನ್ನು ಕ್ಲಿನಿಕ್, ಆಸ್ಪತ್ರೆ, ನರ್ಸಿಂಗ್ ಹೋಂಗಳಲ್ಲಿ ಯಾವ ರೀತಿ ಚಿಕಿತ್ಸೆ ನೀಡಬೇಕು ಎಂಬುದರ ಬಗ್ಗೆಯೂ ಸರ್ಕಾರ ಮಾರ್ಗದರ್ಶನ ಕಳುಹಿಸಲಿದೆ ಎಂದರು. ಲಾಕ್‌ಡೌನ್‍ ಸಮಸ್ಯೆಯಿಂದ ತಮ್ಮ ಊರಿಗೆ ತೆರಳಲಾಗದ ವಲಸೆ ಕಾರ್ಮಿಕರಿಗೆ ಅಂತರ್ ಜಿಲ್ಲೆಗಳ ನಡುವೆ ಪ್ರಯಾಣಿಸಲು ಅನುಮತಿ ನೀಡುವ ಸಂಬಂಧ ಒಂದೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತೆ. ಮೊದಲ ಹಂತದಲ್ಲಿ ವಲಸೆ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕೃಷಿ ಕಾರ್ಯ ಕೈಗೊಳ್ಳಲು ಅಥವಾ ತಾವು ಉದ್ಯೋಗ ಮಾಡುತ್ತಿರುವ ಸ್ಥಳಗಳಿಗೆ ತಲುಪುವ ಕಾರಣಕ್ಕಾಗಿ ಸ್ವಗ್ರಾಮಗಳಿಗೆ ಕಳುಹಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಂದಲೂ ವಲಸೆ ಕಾರ್ಮಿಕರು ತಮ್ಮ ಜಿಲ್ಲೆಗೆ ತೆರಳಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ. ಈಗಾಗಲೇ ಮಂಗಳೂರು ಹೊರತುಪಡಿಸಿ ಉಳಿದ ತಾಲೂಕುಗಳಿಂದ ವಲಸೆ ಕಾರ್ಮಿಕರನ್ನು ಕಳುಹಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಈವರೆಗೆ ಸುಮಾರು 4000 ಮಂದಿ ಈಗಾಗಲೇ ತೆರಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇನ್ನು 3-4 ದಿನಗಳೊಳಗೆ ಇನ್ನಷ್ಟು ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಿ ಕೊಡುವ ಕಾರ್ಯ ಪೂರ್ಣಗೊಳ್ಳಲಿದೆ ಎಂದರು.

ವಿದೇಶಗಳಲ್ಲಿ ಜಿಲ್ಲೆಯ ಸಾಕಷ್ಟು ಜನರ ಸಿಲುಕಿಕೊಂಡಿದ್ದಾರೆ. ಇಲ್ಲಿಗೆ ಬರಬೇಕೆಂದು ಮನವಿ ಮಾಡುತ್ತಿದ್ದಾರೆ. ಇಂತವರನ್ನು ಕರೆತರುವ ಬಗ್ಗೆ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದರು. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕರಾದ ಹರೀಶ್ ಪೂಂಜಾ, ಯು ಟಿ ಖಾದರ್, ಅಂಗಾರ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್‌ಕುಮಾರ್, ಐವನ್ ಡಿಸೋಜ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್, ಪೊಲೀಸ್ ಕಮಿಷನರ್ ಡಾ. ಪಿ ಎಸ್ ಹರ್ಷ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.