ಮಂಗಳೂರು: ನಗರದ ಕಟ್ಟಡಗಳ ಗೋಡೆಗಳಲ್ಲಿ ಉಗ್ರ ಬರಹ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ಲಭ್ಯವಿದ್ದಲ್ಲಿ ಪೊಲೀಸ್ ಇಲಾಖೆಗೆ ತಿಳಿಸುವಂತೆ ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ವಿನಂತಿಸಿದ್ದಾರೆ.
ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಉಪಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ( ಮೊಬೈಲ್ ನಂಬರ್ 9480802304), ಉಪ ಪೊಲೀಸ್ ಆಯುಕ್ತರು ಅಪರಾಧ ಮತ್ತು ಸಂಚಾರ ವಿಭಾಗ (ಮೊಬೈಲ್ ನಂಬರ್ 9480802305), ನಗರ ನಿಯಂತ್ರಣ ಕೊಠಡಿ ( 08242220800) ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಹಾಗೂ ಮಾಹಿತಿ ನೀಡಿದ ವ್ಯಕ್ತಿಯ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಇಂತಹ ಅಪರಾಧಗಳನ್ನು ತಡೆಗಟ್ಟುವುದು ಅತೀ ಅವಶ್ಯಕ. ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಗೋಡೆಗಳಲ್ಲಿ ಉಗ್ರ ಬರಹ.. ಮಾಹಿತಿ ನೀಡಲು ಪೊಲೀಸ್ ಕಮಿಷನರ್ ಮನವಿ - A furious writing case on the walls of Mangalore
ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಇಂತಹ ಅಪರಾಧಗಳನ್ನು ತಡೆಗಟ್ಟುವುದು ಅತೀ ಅವಶ್ಯಕ. ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು..