ETV Bharat / state

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗಣಹೋಮ - ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸರಸ್ವತಿ ಪೂಜೆ

ಇಂದಿನಿಂದ ಶಾಲಾ-ಕಾಲೇಜುಗಳಲ್ಲಿ ತರಗತಿಗಳು ಆರಂಭವಾಗಿದ್ದು, ಮೊದಲ ದಿನ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗಣಹೋಮ ಆಯೋಜಿಸಲಾಗಿತ್ತು.

Gana homa in Puttur vivekananda PU college
ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗಣಹೋಮ
author img

By

Published : Jan 1, 2021, 1:13 PM IST

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ತರಗತಿ ಆರಂಭಕ್ಕೂ ಮುನ್ನ ಸರಸ್ವತಿ ಪೂಜೆ ಮತ್ತು ಗಣಹೋಮ ಕಾರ್ಯಕ್ರಮ ಆಯೋಜಿಸಲಾಗಿತ್ತು.

Gana homa in Puttur vivekananda PU college
ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗಣಹೋಮ

"ಯಾವುದೇ ಒಂದು ವಿದ್ಯಾಸಂಸ್ಥೆ ಅಥವಾ ವಿದ್ಯಾರ್ಥಿಯು ಬೆಳಗಬೇಕಾದರೆ ತನ್ನೊಳಗಿರುವ ಅಂತಃಶಕ್ತಿಯನ್ನು ತೋರಿಸಬೇಕು. ಇದಕ್ಕೆ ವಿದ್ಯಾ ದೇವತೆಯಾದ ಸರಸ್ವತಿಯ ಅನುಗ್ರಹ ಅತ್ಯಗತ್ಯ. ಈ ದಿಶೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯ ಪ್ರತಿವರ್ಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಂಡು ಬರುತ್ತಿದೆ. ಭಗವಂತನ ಆಶೀರ್ವಾದದಿಂದ ಸತ್ಕಾರ್ಯಗಳು ಕೈಗೂಡುತ್ತಿವೆ. ಈ ಮೂಲಕ ಎಲ್ಲರಿಗೂ ಆಯುರಾರೋಗ್ಯ ಮತ್ತು ಸುಖ, ಶಾಂತಿ, ನೆಮ್ಮದಿ ಲಭಿಸಲಿ. ಈ ಮೂಲಕ ಸಂಸ್ಥೆಯಲ್ಲಿ ಕಲಿಯುತ್ತಿರುವ ಎಲ್ಲರಿಗೂ ಆ ಸರಸ್ವತಿಯ ಅನುಗ್ರಹವು ಪ್ರಾಪ್ತಿಯಾಗಲಿ." ಎಂದು ಕಶೆಕೋಡಿ ಕಾರ್ತಿಕ್ ಶಾಸ್ತ್ರಿ ಶುಭ ಹಾರೈಸಿದರು.

ಇದನ್ನೂ ಓದಿ: 80 ಕೆಜಿ ತೂಕದ ಕಬ್ಬು ಹೊತ್ತು, ಮೂರು ಕಿಲೋಮೀಟರ್ ನಡೆದ ಯುವಕ

ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕ ಸಂತೋಷ್ ಬಿ, ಸದಸ್ಯ ರವಿ ಮುಂಗ್ಲಿಮನೆ, ವತ್ಸಲಾ ರಾಜ್ಞಿ, ಪ್ರಾಂಶುಪಾಲ ಮಹೇಶ ನಿಟಿಲಪುರ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ, ವಿದ್ಯಾರ್ಥಿ ಸಮೂಹ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.