ಮಂಗಳೂರು: ಮಹಾತ್ಮ ಗಾಂಧೀಜಿಯವರು ಬಿಟ್ಟು ಹೋದ ಆದರ್ಶಗಳ ಜೊತೆಗೆ ಹೆಜ್ಜೆ ಇಡೋಣ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳೂರಿನ ಪುರಭವನದ ಗಾಂಧಿಪಾರ್ಕ್ನಲ್ಲಿ ದ.ಕ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಾಣೆ ಮಾಡಿ ಮಾತನಾಡಿದರು.
ಕಾರ್ಯಕ್ರಮಕ್ಕೆ ಮುನ್ನ ಬಲ್ಮಠದಿಂದ ಗಾಂಧಿ ಪಾರ್ಕ್ ವರೆಗೆ ಭಾರತ ಸೇವಾದಳದ ವಿದ್ಯಾರ್ಥಿಗಳ ಪ್ರಭಾತ್ ಫೇರಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ದ.ಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮಂಗಳೂರು ಪೊಲೀಸ್ ಕಮೀಷನರ್ ಡಾ ಪಿ ಎಸ್ ಹರ್ಷ, ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಮೊದಲಾದವರು ಭಾಗಿಯಾಗಿದ್ದರು.