ETV Bharat / state

ಮೋದಿ ಮಂಗಳೂರು ಭೇಟಿ ಕಾರ್ಯಕ್ರಮದ ಸಮಯ ಬದಲಾವಣೆ: ಶಾಲಾ ಕಾಲೇಜುಗಳಿಗೆ ರಜೆ - ಸಭಾ ಕಾರ್ಯಕ್ರಮ

ಪ್ರಧಾನಿ ಮೋದಿ ಮಂಗಳೂರಿಗೆ ಬರುವ ದಿನವೇ ಹೆಚ್ಚಿನ ಕಡೆ ಸಾರ್ವಜನಿಕ ಗಣೇಶೋತ್ಸವದ ಶೋಭಯಾತ್ರೆ, ಗಣಪತಿ ನಿಮಜ್ಜನ ಕಾರ್ಯಕ್ರಮಗಳು ನಡೆಯಲಿವೆ. ಹೀಗಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು
ಮಂಗಳೂರು
author img

By

Published : Aug 30, 2022, 6:19 PM IST

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಸೆ.2 ರಂದು ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಗಣೇಶೋತ್ಸವ ಕಾರ್ಯಕ್ರಮ ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಾಲಾ ಕಾಲೇಜಿಗೆ ರಜೆ: ಸೆ. 2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ. ಗಣೇಶ ಚತುರ್ಥಿಯ ಮೂರನೇ ದಿನವಾದ ಅಂದು ನಗರದ ಹೆಚ್ಚಿನ ಕಡೆ ಸಾರ್ವಜನಿಕ ಗಣೇಶೋತ್ಸವದ ಶೋಭಯಾತ್ರೆ, ಗಣಪತಿ ನಿಮಜ್ಜನ ಕಾರ್ಯಕ್ರಮಗಳು ನಡೆಯಲಿವೆ. ಗಣಪತಿ ನಿಮಜ್ಜನ ಶೋಭಯಾತ್ರೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಮತ್ತು ಮಕ್ಕಳ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಅಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಆದೇಶ ಪ್ರತಿ
ಜಿಲ್ಲಾಧಿಕಾರಿ ಆದೇಶ ಪ್ರತಿ

ಸೆ.2 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ. ಈ ರಜೆ ನೀಡಿರುವ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವಜನಿಕ ರಜಾ ದಿನಗಳಂದು ಸರಿದೂಗಿಸಿ ನಿರ್ವಹಿಸುವಂತೆ ಸೂಚಿಸಲಾಗಿದೆ.

ಕಾರ್ಯಕ್ರಮದ ಸಮಯ ಬದಲಾವಣೆ: ಸೆ.2 ರಂದು ಪ್ರಧಾನಿ ಮೋದಿಯವರ ಮಂಗಳೂರು ಭೇಟಿ ಕಾರ್ಯಕ್ರಮದ ಸಮಯ ಬದಲಾವಣೆಯಾಗಿದ್ದು, ಮಧ್ಯಾಹ್ನ 1ಗಂಟೆಗೆ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿಂದು ಈ ಕುರಿತು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕೊಚ್ಚಿನ್​​ನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಗೆ ಆಗಮಿಸಲಿದ್ದಾರೆ. ಅಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಲಕ್ಷಾಂತರ ಕಾರ್ಯಕರ್ತರನ್ನು, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಇದನ್ನೂ ಓದಿ: ಸೆಪ್ಟಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಕಡಲೂರಲ್ಲಿ ಎಸ್​ಪಿಜಿ ತಂಡದಿಂದ ಪರಿಶೀಲನೆ

ಲಕ್ಷಾಂತರ ಕಾರ್ಯಕರ್ತರ ಆಗಮನ: ಈ ಕಾರ್ಯಕ್ರಮಕ್ಕೆ ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಿಂದ ಲಕ್ಷಾಂತರ ಮಂದಿ ಕಾರ್ಯಕರ್ತರು ಬರಲಿದ್ದಾರೆ. ಈಗಾಗಲೇ 1,461 ಬಸ್ ಗಳನ್ನು, 200 ಟೆಂಪೋ ಟ್ರಾವೆಲ್ ಗಳನ್ನು ಬುಕ್ಕಿಂಗ್ ಮಾಡಲಾಗಿದೆ. ಜಿಲ್ಲಾಡಳಿತ 70 ಸಾವಿರಕ್ಕೂ ಅಧಿಕ ಮಂದಿ ಫಲಾನುಭವಿಗಳನ್ನು ಗುರುತಿಸಿ ಕಾರ್ಯಕ್ರಮಕ್ಕೆ ಆಹ್ವಾನವನ್ನು ನೀಡಿದೆ ಎಂದು ಮಾಹಿತಿ ನೀಡಿದರು.

ಸಭಾ ಕಾರ್ಯಕ್ರಮ: ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆವರೆಗೆ ಸಭಾ ಕಾರ್ಯಕ್ರಮ ಜರುಗಲಿದೆ. ಕಾರ್ಯಕರ್ತರು ಮಧ್ಯಾಹ್ನ 11.30ರ ಒಳಗಡೆ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.