ETV Bharat / state

ಮಂಗಳೂರು ವಿವಿಯಲ್ಲಿ ಗಣೇಶೋತ್ಸವ ವಿವಾದ : ಕುಲಪತಿ ಸ್ಪಷ್ಟನೆ

author img

By ETV Bharat Karnataka Team

Published : Sep 6, 2023, 10:28 PM IST

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ವಿವಿ ಕುಲಪತಿ ಜಯರಾಜ್​ ಅಮೀನ್ ಸ್ಪಷ್ಟನೆ ನೀಡಿದ್ದಾರೆ.

ganeshothsava-at-mangaluru-university
ಮಂಗಳೂರು ವಿವಿಯಲ್ಲಿ ಗಣೇಶೋತ್ಸವ ವಿವಾದ : ಕುಲಪತಿ ಸ್ಪಷ್ಟನೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದಕ್ಕೆ ಮಂಗಳೂರು ವಿವಿ ಕುಲಪತಿ ಪ್ರೊ. ಜಯರಾಜ್​ ಅಮೀನ್​ ಸ್ಪಷ್ಟನೆ ನೀಡಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸ್ಟೇಡಿಯಂನಲ್ಲಿ ಪ್ರತಿ ವರ್ಷ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಗಣೇಶೋತ್ಸವದ ವೆಚ್ಚವನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಭರಿಸಲಾಗುತ್ತಿತ್ತು. ಆದರೆ, ಆಡಿಟ್ ವೇಳೆ ಈ ಖರ್ಚಿಗೆ ಆಕ್ಷೇಪ ವ್ಯಕ್ತವಾಗಿತ್ತು.

ganeshothsava-at-mangaluru-university
ವಿವಿ ಕುಲಪತಿ ಜಯರಾಜ್​ ಅಮೀನ್ ಸ್ಪಷ್ಟನೆ

ಹಾಗಾಗಿ ಈ ಬಾರಿ ಹೊಸದಾಗಿ ನೇಮಕವಾದ ಮಂಗಳೂರು ವಿವಿ ಕುಲಪತಿ ಜಯರಾಜ್ ಅಮೀನ್ ಅವರು ವಿಶ್ವವಿದ್ಯಾನಿಲಯದಿಂದ ಗಣೇಶೋತ್ಸವ ಆಚರಿಸುವ ವಿಚಾರದಲ್ಲಿ ಗೊಂದಲದಲ್ಲಿದ್ದರು. ಇದರ ಜೊತೆಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ವಿಶ್ವವಿದ್ಯಾನಿಲಯದ ಕುಲಪತಿ ಜಯರಾಜ್ ಅಮೀನ್ ಒತ್ತಡ ಹೇರಿ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಕುಲಪತಿ ಜಯರಾಜ್ ಅಮೀನ್ ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸಲಹೆ ಕೇಳಿದ್ದರು. ಇದೀಗ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಿಸುವ ಬಗ್ಗೆ ಕುಲಪತಿ ಜಯರಾಜ್ ಅಮೀನ್ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು ವಿವಿಯಲ್ಲಿ ಗಣೇಶೋತ್ಸವ ಆಚರಣೆ : ಈ ಬಗ್ಗೆ ಕುಲಪತಿಗಳ ಕಾರ್ಯಾಲಯ ನೀಡಿರುವ ಪತ್ರದಲ್ಲಿ, "ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕುಲಪತಿಗಳಿಂದ ವಿರೋಧವಿದೆ ಎಂದು ಕಳೆದ ಕೆಲವು ದಿನಗಳಿಂದ ಮಾಧ್ಯಮದಲ್ಲಿ ವರದಿಯಾಗುತ್ತಿದೆ. ಈ ವಿಚಾರ ಸತ್ಯಕ್ಕೆ ದೂರವಾದದು ಹಾಗೂ ವಿಷಾದನೀಯ. ವಿಶ್ವವಿದ್ಯಾನಿಲಯದ ಆವರಣದಲ್ಲಿ ಗಣೇಶೋತ್ಸವ ನಡೆಸಲು ಯಾವುದೇ ನಿರಾಕರಣೆ/ವಿರೋಧ ಇರುವುದಿಲ್ಲ. ಈ ಹಿಂದೆ ನಡೆದಂತೆ ಈ ವರ್ಷವೂ ವಿವಿಯ ಆವರಣದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : 'ರಸ್ತೆಬದಿ ಕಸ ಎಸೆಯಬೇಡಿ'.. ಪರಿಸರ ಜಾಗೃತಿಗಾಗಿ ರಾಷ್ಟ್ರೀಯ ಹೈವೇ ಬದಿ ನಿಂತು ಯುವಕನ ಏಕಾಂಗಿ ಹೋರಾಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.