ETV Bharat / state

ಘಾನಾದಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್: ತುರ್ತು ಸಭೆ ನಡೆಸಿದ ಜಿಲ್ಲಾಧಿಕಾರಿ - ಮಂಗಳೂರು ಟುಡೆ ನ್ಯೂಸ್

ಘಾನದಿಂದ ಬಂದ ಪ್ರಯಾಣಿಕರೊಬ್ಬರ ಆರ್‌ಟಿಪಿಸಿಆರ್ ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದ ಮುಖ್ಯಸ್ಥರ ಜೊತೆ ಸಭೆ ನಡೆಸಿದರು.

Ghana returned got covid positive
ಘಾನದಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್
author img

By

Published : Dec 17, 2021, 9:03 PM IST

ಮಂಗಳೂರು: ಹೈರಿಸ್ಕ್ ದೇಶವಾಗಿರುವ ಘಾನದಿಂದ ಬಂದ ಪ್ರಯಾಣಿಕರೊಬ್ಬರ ಆರ್‌ಟಿಪಿಸಿಆರ್ ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತುರ್ತಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯಸ್ಥರ ಜೊತೆ ಸಭೆ ನಡೆಸಿದರು.

ಇಂದು ಮಧ್ಯಾಹ್ನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ, ಘಾನ ದೇಶದಿಂದ ಬಂದ ಪ್ರಯಾಣಿಕರೊಬ್ಬರನ್ನು ನಿನ್ನೆ ರಾತ್ರಿಯೇ ವೆನ್‍ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್‍ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ.

ಆ ಪ್ರಯಾಣಿಕ ಆಸೀನವಾಗಿದ್ದ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರು ಎಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ಆರ್‌ಟಿಪಿಸಿಆರ್ ಮತ್ತು ರ್ಯಾಂಡಮೈಸ್​​ ಪರೀಕ್ಷೆಗೆ ಒಳಪಡಿಸಿ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವದ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಅವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್‌ಟಿಪಿಸಿಆರ್ ಪರೀಕ್ಷೆ, ಇಮಿಗ್ರಿಯೇಶನ್, ಚೆಕ್ಕಿಂಗ್ ಪಾಯಿಂಟ್, ಟ್ರಾನ್‍ಸಿಟ್ ಪ್ಯಾಸೆಂಜರ್ ಹಾಗೂ ಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಏರ್‌ಪೋರ್ಟ್ ಚೀಫ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ.ಎಚ್.ಅಶೋಕ್, ಏರ್​ಲೈನ್​​ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರಿಯೇಶನ್ ಆಫೀಸರ್​​​​ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

ಇದನ್ನೂ ಓದಿ: ಕೇಂದ್ರ ಮಾಜಿ ಸಚಿವ ಆರ್​ ಎಲ್​​​ ಜಾಲಪ್ಪ ವಿಧಿವಶ.. ರಾಜ್ಯ ನಾಯಕರ ಸಂತಾಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.