ETV Bharat / state

ಮೋರಿಯಲ್ಲಿ ಬಾಲಕಿಯ ಮೃತದೇಹ ಪತ್ತೆ ಪ್ರಕರಣ: ಕೂಲಿ ಕಾರ್ಮಿಕರ ತೀವ್ರ ವಿಚಾರಣೆ - Tiles factory

ಭಾನುವಾರ ಕಾರ್ಖಾನೆಗೆ ರಜೆ ಇದ್ದು, ಕರ್ನಾಟಕ ರಾಜ್ಯದ ಎಲ್ಲಾ ಕಾರ್ಮಿಕರು ರಜೆಯಲ್ಲಿದ್ದರು. ರವಿವಾರ ಸಂಜೆ ಜಾರ್ಖಾಂಡ್ ಮೂಲದ 8ರ ಹರೆಯದ ಬಾಲಕಿಯೋರ್ವಳು ದಿಢೀರ್ ನಾಪತ್ತೆಯಾಗಿದ್ದಳು. ಹುಡುಕಾಟ ನಡೆಸಿದಾಗ ಆಕೆ ಸಮೀಪದ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮೋರಿಯಲ್ಲಿ ಬಾಲಕಿಯ ಮೃತದೇಹ ಪತ್ತೆ ಪ್ರಕರಣ
ಮೋರಿಯಲ್ಲಿ ಬಾಲಕಿಯ ಮೃತದೇಹ ಪತ್ತೆ ಪ್ರಕರಣ
author img

By

Published : Nov 23, 2021, 12:28 AM IST

ಮಂಗಳೂರು: ನಗರದ ಹೊರವಲಯದಲ್ಲಿರುವ ಉಳಾಯಿಬೆಟ್ಟು ಸಮೀಪದ ಟೈಲ್ಸ್ ಫ್ಯಾಕ್ಟರಿ ಆವರಣದಲ್ಲಿನ ಒಳಚರಂಡಿಯಲ್ಲಿ 8 ವರ್ಷದ ಬಾಲಕಿಯ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ (Mangalore Countryside Station ) ಪೊಲೀಸರು ಉತ್ತರ ಭಾರತ ಮೂಲದ 20ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ವಶಪಡಿಸಿಕೊಂಡವರೆಲ್ಲರೂ ಅದೇ ಟೈಲ್ಸ್ ಕಾರ್ಖಾನೆಯಲ್ಲಿ (Tiles factory) ಕೆಲಸ ಮಾಡುತ್ತಿರುವವರಾಗಿದ್ದಾರೆ.ಈ ಟೈಲ್ಸ್ ಫ್ಯಾಕ್ಟರಿಯಲ್ಲಿ ಜಾರ್ಖಂಡ್, ಅಸ್ಸಾಂ, ಬಿಹಾರ ಮೂಲದ ಹಾಗೂ ಕರ್ನಾಟಕದ ಹಲವಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಭಾನುವಾರ ಕಾರ್ಖಾನೆಗೆ ರಜೆ ಇದ್ದು, ಕರ್ನಾಟಕ ರಾಜ್ಯದ ಎಲ್ಲಾ ಕಾರ್ಮಿಕರು ರಜೆಯಲ್ಲಿದ್ದರು. ರವಿವಾರ ಸಂಜೆ ಜಾರ್ಖಾಂಡ್ ಮೂಲದ 8ರ ಹರೆಯದ ಬಾಲಕಿಯೋರ್ವಳು ದಿಢೀರ್ ನಾಪತ್ತೆಯಾಗಿದ್ದಳು. ಹುಡುಕಾಟ ನಡೆಸಿದಾಗ ಆಕೆ ಸಮೀಪದ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

ಕಾಮುಕರು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿ ಕೊಲೆಗೈದು ಮೋರಿಗೆ ಎಸೆದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಬೆಳಕಿಗೆ ಬಂದ ತಕ್ಷಣ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಪೊಲೀಸರು ಟೈಲ್ಸ್ ಫ್ಯಾಕ್ಟರಿಯ ಹಲವು ಮಂದಿ ಕಾರ್ಮಿಕರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಕಾರ್ಮಿಕರಿಂದ ಯಾವುದೇ ಸುಳಿವು ಈವರೆಗೆ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಟೈಲ್ಸ್ ಫ್ಯಾಕ್ಟರಿಯ ಸಿಸಿ ಕ್ಯಾಮರಾಗಳನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಮೃತದೇಹ ಪತ್ತೆಯಾದ ಜಾಗದಲ್ಲಿ ಓಡಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿಲ್ಲ ಎಂದು ಹೇಳಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.