ETV Bharat / state

ರಾಮ ಮಂದಿರ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆ - Gives 25 lakhs from Dharmasthala to build Ram Mandir

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ.ಗಳ ಡಿಡಿಯನ್ನು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವನ್ ಅವರಿಗೆ ಹಸ್ತಾಂತರಿಸಿದರು.

Gives 25 lakhs from Dharmasthala to build Ram Mandir
ರಾಮ ಮಂದಿರ ನಿರ್ಮಾಣಕ್ಕೆ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆ
author img

By

Published : Feb 6, 2021, 4:10 PM IST

ಬೆಳ್ತಂಗಡಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀರಾಮ ಮಂದಿರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆಯನ್ನು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಿದರು.

ವಿಶ್ವ ಹಿಂದೂ ಪರಿಷತ್‌ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ಘೋಷಿಸಿದ್ದ 25 ಲಕ್ಷ ರೂ. ನಿಧಿ ಸಮರ್ಪಣೆಯ ಡಿಡಿಯನ್ನು ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವನ್ ಅವರಿಗೆ ಹಸ್ತಾಂತರಿಸಿದರು.

ಈ ವೇಳೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ. ಪುರಾಣಿಕ್, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ಅಧ್ಯಕ್ಷ ಡಾ. ಪ್ರಸನ್ನ ಕುಮಾರ್, ಬೆಳ್ತಂಗಡಿ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ಅಯೋಧ್ಯೆ ಅಭಿಯಾನದ ಉಜಿರೆ ಸಂಚಾಲಕ ಹರೀಶ್ ರಾವ್ ಮೊದಲಾದವರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.