ETV Bharat / state

ಪ್ರಕೃತಿ ಚಿಕಿತ್ಸಾ ಪದ್ಧತಿ ವಿಶ್ವದಲ್ಲೇ ಶ್ರೇಷ್ಠ: ಗೋವಾ ಸಿಎಂ ಪ್ರಮೋದ್ ಸಾವಂತ್

ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಗೌರವ ಬರುವಂತೆ ನೂತನ ಪದವೀಧರರು ಪ್ರಯತ್ನಿಸಬೇಕು. ಸದಾ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು-ಗೋವಾ ಸಿಎಂ ಪ್ರಮೋದ್ ಸಾವಂತ್.

Goa cm Pramod Sawant visits dharmasthala
ಗೋವಾ ಸಿಎಂ ಪ್ರಮೋದ್ ಸಾವಂತ್
author img

By

Published : Oct 9, 2022, 9:06 AM IST

ಬೆಳ್ತಂಗಡಿ (ದಕ್ಷಿಣ ಕನ್ನಡ): ಆರೋಗ್ಯ ಕಾಪಾಡಲು ಸಾವಿರಾರು ವರ್ಷಗಳಿಂದ ಭಾರತದಲ್ಲಿ ಋಷಿ ಮುನಿಗಳು ಪ್ರಶಾಂತ ಪ್ರಕೃತಿಯ ಮಡಿಲಲ್ಲಿ ಬಳಸುತ್ತಿದ್ದ ಪ್ರಕೃತಿ ಚಿಕಿತ್ಸಾ ಪದ್ಧತಿ ಮತ್ತು ಯೋಗ ವಿಜ್ಞಾನವು ವಿಶ್ವದಲ್ಲೇ ಅತ್ಯಂತ ಜನಪ್ರಿಯ ಹಾಗೂ ಶ್ರೇಷ್ಠ ಶುಶ್ರೂಷಾ ವಿಧಾನವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಉಜಿರೆಯ ಎಸ್​​ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 230 ಪದವೀಧರರಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು. ಬಳಿಕ ಮಾತನಾಡಿದ ಪ್ರಮೋದ್ ಸಾವಂತ್ ಪ್ರಕೃತಿಯಲ್ಲಿರುವ ಪಂಚಭೂತಗಳನ್ನು ಬಳಸಿ ಪ್ರಕೃತಿ ಚಿಕಿತ್ಸಾ ಪದ್ಧತಿಯಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಲಾಗುತ್ತದೆ. ಆಧುನಿಕ ಆಹಾರ ಸೇವನಾ ವಿಧಾನ, ಸದಾ ಒತ್ತಡ, ಭಯ, ಆತಂಕ ಮತ್ತು ಗಡಿಬಿಡಿಯ ಜೀವನ ಶೈಲಿ ಹಾಗೂ ಸಕಾಲದಲ್ಲಿ ಊಟ, ನಿದ್ರೆ, ವಿಶ್ರಾಂತಿ ಮಾಡದಿರುವುದು ಮೊದಲಾದ ಹತ್ತು ಹಲವು ಕಾರಣಗಳಿಂದ ಪಂಚೇಂದ್ರಿಯಗಳ ನಿಯಂತ್ರಣವಿಲ್ಲದೆ ಎಲ್ಲರೂ ಅನೇಕ ರೋಗಗಳಿಗೆ ಬಲಿಯಾಗುತ್ತಾರೆ.

ಧರ್ಮಸ್ಥಳಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ..

ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ನೇತೃತ್ವದಲ್ಲಿ ಪ್ರಕೃತಿ ಚಿಕಿತ್ಸಾ ವಿಧಾನ ಮತ್ತು ಯೋಗಾಭ್ಯಾಸ ಭಾರತಕ್ಕೆ ವಿಶ್ವ ಗುರುವಿನ ಮಾನ್ಯತೆ ದೊರಕಿದೆ. ವಿಶ್ವದೆಲ್ಲೆಡೆ ಜೂನ್ 21 ವಿಶ್ವಯೋಗ ದಿನಾಚರಣೆ ಮಾಡುತ್ತಿದ್ದೇವೆ. ಮಹಾತ್ಮಾ ಗಾಂಧೀಜಿ ಕೂಡಾ ಪ್ರಕೃತಿ ಚಿಕಿತ್ಸಾ ವಿಧಾನ ಮತ್ತು ಯೋಗಾಭ್ಯಾಸ ಬಳಸುತ್ತಿದ್ದರು. ನಾವು ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಎಷ್ಟು ಆರೋಗ್ಯವಂತರಾಗಿ ಬದುಕುತ್ತೇವೆ ಎಂಬುದು ಮುಖ್ಯ ಎಂದರು.

ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ: ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದ ಬಗ್ಗೆ ಜನರಿಗೆ ವಿಶ್ವಾಸ ಮತ್ತು ಗೌರವ ಬರುವಂತೆ ನೂತನ ಪದವೀಧರರು ಪ್ರಯತ್ನಿಸಬೇಕು. ಸದಾ ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಉತ್ತಮ ಸಂವಹನ ಕಲೆಯನ್ನು ಬೆಳೆಸಿಕೊಂಡು ತಮ್ಮಲ್ಲಿ ಬಂದವರಿಗೆ ಆಪ್ತ ಸಮಾಲೋಚನೆ ಮತ್ತು ಆಪ್ತಸಲಹೆಯೊಂದಿಗೆ ಈ ಪ್ರಾಚೀನ ಪದ್ಧತಿ ಬಗ್ಯೆ ವಿಶ್ವಾಸ, ನಂಬಿಕೆ ಮತ್ತು ಗೌರವ ಮೂಡಿ ಬರುವಂತೆ ಮಾಡಬೇಕು. ಸದಾ ನಗುಮೊಗದೊಂದಿಗೆ ಮಾನವೀಯತೆಯಿಂದ ಸೇವೆ ನೀಡಬೇಕು ಎಂದು ಅವರು ಸಲಹೆ ನೀಡಿದರು.

Goa cm Pramod Sawant visits dharmasthala
ಗೋವಾ ಸಿಎಂ ಪ್ರಮೋದ್ ಸಾವಂತ್ ಧರ್ಮಸ್ಥಳಕ್ಕೆ ಭೇಟಿ

ವೈದ್ಯ ವೃತ್ತಿ ಪವಿತ್ರ: ನೂತನ ಪದವೀಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಕೆ ರಮೇಶ್ ಮಾತನಾಡಿ, ಸಂಶೋಧನೆ ಮತ್ತು ದಾಖಲಾತಿಗೆ ಹೆಚ್ಚಿನ ಒತ್ತು ನೀಡಿ. ನೂತನ ಪದವೀಧರರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈದ್ಯ ವೃತ್ತಿ ಪವಿತ್ರವಾಗಿದ್ದು, ರೋಗಿಗಳ ಸೇವೆ ಮಾಡಬೇಕು. ಅಲೋಪತಿಗೆ ಕೇವಲ 200 ವರ್ಷಗಳ ಇತಿಹಾಸವಿದ್ದರೆ, ಪ್ರಕೃತಿ ಚಿಕಿತ್ಸೆಗೆ ಸಾವಿರಾರು ವರ್ಷಗಳ ಹಿನ್ನೆಲೆ ಇದೆ. ಇಂದು ವಿಶ್ವದೆಲ್ಲೆಡೆ ಜನಪ್ರಯವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸಕಾಲದಲ್ಲಿ ಹಿತ-ಮಿತ ಆಹಾರ ಸೇವನೆಯಿಂದ ಆರೋಗ್ಯ ಭಾಗ್ಯ ಹೊಂದಬಹುದು. ಧರ್ಮಸ್ಥಳದ ವತಿಯಿಂದ ಬೆಂಗಳೂರಿನ ನೆಲಮಂಗಲ, ಪರೀಕಾ ಮಣಿಪಾಲ ಮತ್ತು ಧರ್ಮಸ್ಥಳದಲ್ಲಿ ಮೂರು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗಳಿದ್ದು, ಸದಾ ಸಾಧಕರಿಂದ ತುಂಬಿರುತ್ತದೆ. ಹಾಸನ, ಉಡುಪಿ ಮತ್ತು ಬೆಂಗಳೂರಿನಲ್ಲಿರುವ ಆಯುರ್ವೇದ ಆಸ್ಪತ್ರೆಗಳಿಗೂ ಒಳ್ಳೆಯ ಪ್ರತಿಕ್ರಿಯೆ ದೊರಕುತ್ತಿದೆ. ಭಾರತದ ಪ್ರಾಚೀನ ಚಿಕಿತ್ಸಾ ಪದ್ಧತಿ ಬಗ್ಯೆ ಜನರಿಗಿರುವ ವಿಶ್ವಾಸ ಮತ್ತು ಗೌರವಕ್ಕೆ ಇದು ಸಾಕ್ಷಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹೇಮಾವತಿ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೋವಾದಲ್ಲಿ ಪೋರ್ಚುಗೀಸ್​ ದಾಳಿಯಿಂದ ಹಾಳಾದ ದೇವಾಲಯಗಳ ಪುನರ್​ನಿರ್ಮಾಣ: ಸಿಎಂ​ ಸಾವಂತ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.