ETV Bharat / state

ಮಂಗಳೂರು ಏರ್ಪೋರ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 32 ಲಕ್ಷ ಮೌಲ್ಯದ ಚಿನ್ನ ವಶ

author img

By

Published : Oct 28, 2020, 10:25 AM IST

ದುಬೈನಿಂದ ಮಂಗಳೂರಿಗೆ ಸ್ಪೈಸ್​ ಜೆಟ್ ವಿಮಾನದಲ್ಲಿ ಬಂದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌಲ್ಯದ ಚಿನ್ನವನ್ನು ಕಸ್ಟಮ್ಸ್​ ಅಧಿಕಾರಿಗಳು ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸಿದ್ದಾರೆ.

32.96 ಲಕ್ಷ ಮೌಲ್ಯದ ಚಿನ್ನ
32.96 ಲಕ್ಷ ಮೌಲ್ಯದ ಚಿನ್ನ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಅ.26ರಂದು ದುಬೈನಿಂದ ಮಂಗಳೂರಿಗೆ ಸ್ಪೈಸ್​ ಜೆಟ್ ವಿಮಾನದಲ್ಲಿ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಅಬೂಬಕ್ಕರ್ ಸಿದ್ದಿಕ್ ಎಂಬಾತ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟುಕೊಂಡು ಬಂದಿದ್ದಾನೆ.

ಬಂಧಿತನಿಂದ ರೂ. 32,96,800 ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 634 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.