ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಟಿಕೆ ಸೇರಿದಂತೆ ವಿವಿಧ ವಸ್ತುಗಳಲ್ಲಿ ಅಡಗಿಸಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರಿಷ್ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿ. ಈತ ನಿನ್ನೆ ದುಬಾಯ್ನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರಿಗೆ ಬಂದಿದ್ದ. ಈತನನ್ನು ತಪಾಸಣೆಗೆ ಒಳಪಡಿಸಿದಾಗ ಟಾಯ್ಸ್, ಟ್ರಿಮ್ಮರ್, ವಾಟರ್ ಡಿಸ್ಪೆನ್ಸರ್ ಮತ್ತು ಜ್ಯೂಸ್ನಲ್ಲಿ ಅಡಗಿಸಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
![Gold shipping in toy items: 300g seized in Mangalore](https://etvbharatimages.akamaized.net/etvbharat/prod-images/kn-mng-02-gold-photo-7202146_19042021144013_1904f_1618823413_239.jpg)
ಇದರಲ್ಲಿ 300 ಗ್ರಾಂ ಚಿನ್ನ ಸಿಕ್ಕಿದ್ದು ಇದರ ಮೌಲ್ಯ ರೂ 14.55 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಂಗಳೂರು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.