ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ.
![gold siez](https://etvbharatimages.akamaized.net/etvbharat/prod-images/5114344_90_5114344_1574168991821.png)
ದುಬೈನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಆತ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆತನ ಬಳಿಯಿಂದ 24 ಕ್ಯಾರೆಟ್ ಪರಿಶುದ್ಧತೆಯ 483.57 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 18.47 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪ್ರಯಾಣಿಕನನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.