ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಚಿನ್ನವನ್ನು ಸಾಗಿಸುತ್ತಿದ್ದ ಭಟ್ಕಳ ಮೂಲದ ವ್ಯಕ್ತಿಯನ್ನು ಬಂಧಿಸಿರುವ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 10 ಲಕ್ಷ ರೂ. ಮೌಲ್ಯದ 200 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹಲ್ಲೆ ಪ್ರಕರಣ: ನಂಜನಗೂಡು ಬಿಜೆಪಿ ಯುವ ಮುಖಂಡನಿಗೆ ಮೂರು ವರ್ಷ ಜೈಲು
ಫೆಬ್ರವರಿ 11 ರಂದು ವಿದೇಶದಿಂದ ಬಂದ ವಿಮಾನದಲ್ಲಿ ಬಂದ ಈ ಪ್ರಯಾಣಿಕನನ್ನು ಶೋಧ ನಡೆಸಿದಾಗ ಅಕ್ರಮ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.
ಚಿನ್ನವನ್ನು ಕಾರ್ಬನ್ ಪೇಪರ್ನೊಳಗೆ ಸುತ್ತಿ ಪ್ಯಾಂಟ್ ಒಳಗೆ ಬಚ್ಚಿಟ್ಟುಕೊಂಡು ಆರೋಪಿ ಚಿನ್ನವನ್ನು ಸಾಗಿಸುತ್ತಿದ್ದ. ಬಂಗಾರವನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ಬಂಧಿಸಿರುವ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.