ETV Bharat / state

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಓರ್ವ ವಶಕ್ಕೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ದುಬೈನಿಂದ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರಯಾಣಿಕನೊಬ್ಬನನ್ನು ಪರಿಶೀಲಿಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದೆ.

ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ
ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ
author img

By

Published : Sep 25, 2022, 11:02 PM IST

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪ್ರಯಾಣಿಕನೊಬ್ಬನನ್ನು ಪರಿಶೀಲಿಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಪತ್ತೆಯಾಗಿದೆ.

ಈತ ಧರಿಸಿದ್ದ ಒಳಉಡುಪುಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದರು. 24 ಕ್ಯಾರೆಟ್ ಶುದ್ದತೆಯ 306 ಗ್ರಾಂ ತೂಕದ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 15,36,120 ರೂ. ಎಂದು ಅಂದಾಜಿಸಲಾಗಿದೆ. ಚಿನ್ನ ಮತ್ತು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಓದಿ: ಕಲಬುರಗಿಗೆ ಬಂದ ಏರ್ ಆ್ಯಂಬುಲೆನ್ಸ್: ನಾಳೆ ಸಿಪಿಐ ಶ್ರೀಮಂತ ಇಲ್ಲಾಳ ಬೆಂಗಳೂರಿಗೆ ಏರ್‌ ಲಿಫ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.