ಮಂಗಳೂರು: ವಾರಾಂತ್ಯದ ಕರ್ಫ್ಯೂಗೆ ನಿನ್ನೆಯಂತೆ ಇವತ್ತು ಸಹ ಮಂಗಳೂರಿಗರಿಂದ ಉತ್ತಮ ಬೆಂಬಲ ದೊರಕಿದೆ. ಜನರ ಓಡಾಟ, ವಾಹನ ಸಂಚಾರಕ್ಕೆ ಪೊಲೀಸರು ಸಂಪೂರ್ಣ ಕಡಿವಾಣ ಹಾಕಿದ್ದಾರೆ.
ಇದನ್ನು ಓದಿ:ಸದ್ದಿಲ್ಲದೆ ಎಸ್ಐಟಿ ಮುಂದೆ ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಬೆಳಗ್ಗೆ 6 ರಿಂದ 9ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಕರ್ಫ್ಯೂ ಸಡಿಲಿಕೆ ಇದ್ದರೂ ಸಹ ಅನಗತ್ಯ ಓಡಾಟಕ್ಕೆ ಅವಕಾಶವಿರಲಿಲ್ಲ. ಜನರು ಹಾಲು, ತರಕಾರಿ, ಮೀನು, ಮಾಂಸ, ದಿನಸಿ ಸಾಮಗ್ರಿಗಳ ಖರೀದಿಗೆ ಹತ್ತಿರದ ಅಂಗಡಿಗಳಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು.
ಭಾನುವಾರದ ಕಾರಣ ಬ್ಯಾಂಕ್, ಸರ್ಕಾರಿ ಕಚೇರಿಗಳು ರಜೆ ಇರುವುದರಿಂದ ಜನ ಸಂಚಾರ ಕಡಿಮೆಯಾಗಿತ್ತು.