ಬಂಟ್ವಾಳ: ಮೇಲ್ಕಾರ್ ಸಮೀಪ ಮಾರ್ನಬೈಲ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಮರದ ದಿಮ್ಮಿಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ ಸಂಪೂರ್ಣ ಜಖಂಗೊಂಡಿದ್ದು, ಮೂರು ವಿದ್ಯುತ್ ಕಂಬಗಳು ಧರೆಗುರುಳಿವೆ.
ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಟ್ರಾಫಿಕ್ ಎಸ್ಐ ರಾಜೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುವ ವೇಳೆ ಬೆಳಗ್ಗೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಾರ್ನಬೈಲು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ.