ಬೆಳ್ತಂಗಡಿ: ರಾಜಕೇಸರಿ ಸಂಘಟನೆ ಕಳೆದ ಏಳು ವರ್ಷಗಳಿಂದ ಜನಪರ ಮಾದರಿಯ ಕೆಲಸ ಮಾಡುತ್ತಿದೆ ಎಂದು ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಜಯಂತ ನಡುಬೈಲು ಹೇಳಿದರು.
ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ರಾಜಕೇಸರಿ ಬೆಳ್ತಂಗಡಿ ಇವರ ಆಶ್ರಯದಲ್ಲಿ ಅನುಗ್ರಹ ಜನಸೇವಾ ಕೇಂದ್ರದ ಸಹಯೋಗದಲ್ಲಿ ಇಂದು ಆಯುಷ್ಮಾನ್, ಕಿಸಾನ್ ಸಮ್ಮಾನ್, ಕಾರ್ಮಿಕ ಕಾರ್ಡ್ ನೋಂದಣಿ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಸೋಮೇ ಗೌಡ, ಕುಲಾಲರ ಸಂಘದ ಅಧ್ಯಕ್ಷ ಹರೀಶ್ ಮೂಲ್ಯ ಕಾರಿಂಜ, ಬಿಲ್ಲವ ಸಂಘದ ಉಪಾಧ್ಯಕ್ಷ ಮನೋಹರ್ ಕುಮಾರ್ ಇಳಂತಿಲ, ಪ್ರಸಾದ್ ಶೆಟ್ಟಿ ಏಣಿಂಜೆ, ಕರ್ನಾಟಕ ನೃತ್ಯ ಅಕಾಡಮಿ ಸಂಸ್ಥಾಪಕ ರಾಜೇಶ್ ಕಣ್ಣೂರು, ಅಶ್ರಫ್ ಆಲಿಕುಂಞಿ ಮುಂಡಾಜೆ, ಕಾರ್ತಿಕ್ ಉಪಸ್ಥಿತರಿದ್ದರು.