ಮಂಗಳೂರು: ನಿನ್ನೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ‘ಸರ್ಕಾರಿ ಪ್ರಯೋಜಿತ ಗೋಲಿಬಾರ್’ ಆಗಿದೆ. ಇದರ ಅವಶ್ಯಕತೆ ಇರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ 700 ರಷ್ಟು ಪ್ರತಿಭಟನಾಕಾರರು ಇದ್ದರು. ಇಲ್ಲಿ ಗುಂಪು ಚದುರಿಸಲು ಗೋಲಿಬಾರ್ ನಡೆಸುವ ಅವಶ್ಯಕತೆ ಇರಲಿಲ್ಲ. ಬೇರೆ ಕಡೆ ಸಾವಿರಾರು ಸಂಖ್ಯೆಯ ಪ್ರತಿಭಟನಾಕಾರರು ಇದ್ದರೂ ಇಂತಹ ಪರಿಸ್ಥಿತಿ ಸೃಷ್ಟಿಯಾಗಿಲ್ಲ ಎಂದು ಹೇಳಿದರು.
ಈ ವೇಳೆ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಪೊಲೀಸ್ ಇಲಾಖೆ 144 ಸೆಕ್ಷನ್ ಹಾಕಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಸಾಧಾರಣವಾಗಿ ಯಾವುದಾದರು ಅಹಿತಕರ ಘಟನೆ ನಡೆದ ಬಳಿಕ 144 ಸೆಕ್ಷನ್ ಹಾಕಲಾಗುತ್ತದೆ. ಆದರೆ ಮಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯುವ ಮೊದಲೇ 144 ಸೆಕ್ಷನ್ ಹಾಕಿ ಪ್ರತಿಭಟನಾಕಾರರನ್ನು ಹತ್ತಿಕ್ಕಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.