ಬೆಳ್ತಂಗಡಿ: ವೇಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಕೋಡಿ ಗ್ರಾಮದ ಪಂಜಾಲುಬೈಲು ಮತ್ತು ವೇಣೂರಿನ ಮಹಾವೀರ ನಗರದಲ್ಲಿ ಸಂಚರಿಸಿದ್ದ 40 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರಿಗೆ ಕೋವಿಡ್-19 ಸೋಂಕಿರುವುದು ವರದಿಯಿಂದ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರುವವರು ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವೇಣೂರು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.
ವೇಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಧರಿಸದಿದ್ದಲ್ಲಿ ಗ್ರಾಮ ಪಂಚಾಯಿತಿಯಿಂದ ರೂ.100 ದಂಡ ವಿಧಿಸಲಾಗುವುದು.
ಮೃತ ವ್ಯಕ್ತಿಯ ವಾಸವಿದ್ದ ಮನೆ ವ್ಯಾಪ್ತಿಯು ಸೀಲ್‍ಡೌನ್ (ಕಂಟೈನ್‍ಮೆಂಟ್ ವಲಯ) ಆಗಿರುವುದರಿಂದ ಈ ವ್ಯಾಪ್ತಿಯಲ್ಲಿನ ಮನೆಯ ಸುತ್ತಮುತ್ತ ಸಾರ್ವಜನಿಕರು ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.